ಆರ್ ಜೆಡಿ ಮಾಜಿ ಸಂಸದ ಮೊಹಮ್ಮದ್ ಶಹಾಬುದ್ದಿನ್ ಕೋವಿಡ್ ಗೆ ಬಲಿ
ನವದೆಹಲಿ: ರಾಷ್ಟ್ರೀಯ ಜನತಾದಳದ (ಆರ್ಜೆಡಿ) ಮಾಜಿ ಸಂಸದ ಮೊಹಮ್ಮದ್ ಶಹಾಬುದ್ದಿನ್ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅವರು ಇಲ್ಲಿನ ತಿಹಾರ್ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದರು. ಕೋವಿಡ್ ಸೋಂಕಿಗೆ ಒಳಗಾಗಿದ್ದ ಮೊಹಮ್ಮದ್ ಶಹಾಬುದ್ದಿನ್ಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ಶುಕ್ರವಾರ ಸೂಚನೆ ನೀಡಿತ್ತು.
ಶುಕ್ರವಾರ ಸಂಜೆ ಮೊಹಮ್ಮದ್ ಶಹಾಬುದ್ದಿನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 2004 ರಲ್ಲಿ ಶಹಾಬುದ್ದಿನ್ ತನ್ನ ಸಹಚರರು ಜತೆ ಸೇರಿ ಸಹೋದರರಾದ ಗಿರೀಶ್ ಮತ್ತು ಸತೀಶ್ ಎಂಬುವರ ಮೇಲೆ ಆ್ಯಸೀಡ್ ಸುರಿದು ಬರ್ಬರವಾಗಿ ಹತ್ಯೆ ಮಾಡಿದ್ದರು.