Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಖ್ಯಾತ ಸಾಹಿತಿ ಉಡುಪಿಯ ಡಾ.ಜಿ.ಭಾಸ್ಕರ್ ಮಯ್ಯ ನಿಧನ

ಉಡುಪಿ:ಕರ್ನಾಟಕ ವೈಚಾರಿಕ ಸಾಹಿತ್ಯದ ಮೇರುಕೊಂಡಿಯೊಂದು ಇದು ಕಳಚಿಕೊಂಡಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಖ್ಯಾತ ವೈಚಾರಿಕ ಸಾಹಿತಿ ಉಡುಪಿಯ ಡಾ.ಜಿ.ಭಾಸ್ಕರ್ ಮಯ್ಯ ಕೊವಿಡ್ ಗೆ ಇಂದು ಬಲಿಯಾಗಲಿದ್ದಾರೆ.

ಅವರಿಗೆ 70 ವರ್ಷ ವಯಸ್ಸಾಗಿತ್ತು. ಕಳೆದ 4 ದಿನಗಳಿಂದ ಅವರು ಉಡುಪಿ ಜಿಲ್ಲೆಯ ಸಾಲಿಗ್ರಾಮದ ಪ್ರಣವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ 4:30ರ ಸುಮಾರಿಗೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.

ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ಮೇರು ವ್ಯಕ್ತಿತ್ವ ಹೊಂದಿದ್ದ ಡಾ.ಜಿ.ಭಾಸ್ಕರ್ ಮಯ್ಯ ಅವರ ವೈಚಾರಿಕ ಕೃತಿಗೆ ಕೇಂದ್ರ ಸರ್ಕಾರ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಇವರು ಧೀರ್ಘಕಾಲ ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಹಿಂದಿ ಪ್ರೊಫೆಸರ್ ಆಗಿ ಕೆಲಸ ನಿರ್ವಹಿಸಿದ್ದರು. ವೈಚಾರಿಕ ಹಾಗೂ ಪ್ರಗತಿಪರ ಸಾಹಿತ್ಯದಲ್ಲಿ 50ಕ್ಕೂ ಹೆಚ್ಚು ಗ್ರಂಥ ರಚಿಸಿದ್ದ ಭಾಸ್ಕರ್ ಮಯ್ಯ ಅವರ ನಿಧನಕ್ಕೆ ಸಾಹಿತ್ಯ ಲೋಕ ಕಂಬನಿ ಮಿಡಿದಿದೆ.

No Comments

Leave A Comment