Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ದಾವಣಗೆರೆ: ಕೊರೋನಾ ಭೀತಿ ಹಿನ್ನಲೆ ರೈಲಿಗೆ ತಲೆಕೊಟ್ಟು ಪತ್ರಕರ್ತ ಆತ್ಮಹತ್ಯೆಗೆ ಶರಣು

ದಾವಣಗೆರೆ: ಚಲಿಸುವ ರೈಲಿಗೆ ತಲೆ ಕೊಟ್ಟು ಪತ್ರಕರ್ತರೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದ ಪತ್ರಕರ್ತ ಪರಮೇಶ್(46) ಅಮರಾವತಿ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ದಿನಗಳಿಂದ ಶೀತ, ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಕೊರೋನಾ ಬಂದರೆ ಏನು ಮಾಡುವುದು ಆತಂಕ ಶುರುವಾಗಿತ್ತು.

ಪರೀಕ್ಷೆ ಮಾಡಿಸಿಕೊಂಡು ಪಾಸಿಟಿವ್ ಬಂದರೆ ಎಲ್ಲಿ ಇರೋದು, ಬೆಡ್, ವೆಂಟಿಲೇಟರ್, ಆಕ್ಸಿಜನ್ ಸಿಗುತ್ತಿಲ್ಲ. ಮುಂದೆ ಏನು ಎಂಬ ಚಿಂತೆಯಲ್ಲಿ ಪರಮೇಶ್ ಇದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ.

ವಿಜಯ ಕರ್ನಾಟಕ ಪತ್ರಿಕೆಗೆ ಅರೆಕಾಲಿಕ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಪರಮೇಶ್ ಅವರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದರು.

ಕುಂದೂರು ಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ ನಡೆದಿದ್ದು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment