Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

Gangster Chhota Rajan dies of COVID-19 at AIIMS/ಭೂಗತ ಪಾತಕಿ ಛೋಟಾ ರಾಜನ್ ಕೊರೊನಾಕ್ಕೆ ಬಲಿ

New Delhi, May 07: Underworld don and gangster Chhota Rajan died at the AIIMS, Delhi due to COVID-19. He is an accused in at swear 70 criminal cases in Maharashtra which relate to extortion and murder.

He was admitted to to AIIMS on April 26. Following his arrest from Indonesia in 2015, he was lodged in the Tihar jail. On April 26, the Tihar jail official told the court that Rajan could not be produced via video conferencing as he had tested positive for COVID-19. In 2018, Rajan was convicted and sentenced to life imprisonment in the 2011 murder of Jyotirmoy Dey. Rajan was born Rajendra Nikalje and had 70 criminal cases against him. All the cases related to him were transferred to the Central Bureau Investigation.

ದೆಹಲಿ, ಮೇ 07 : ದಾವುದ್ ಇಬ್ರಾಹಿಂ ಸಹಚರ ಹಾಗೂ ಭೂಗತ ಪಾತಕಿ ಛೋಟಾ ರಾಜನ್ ದೆಹಲಿಯ ಏಮ್ಸ್ ಆಸ್ಪತ್ರೆಯ ಕೊರೊನಾ ಸೋಂಕಿನಿಂದ ಮೇ 7ರ ಶುಕ್ರವಾರ ಮೃತಪಟ್ಟಿದ್ದಾನೆ.

ತಿಹಾರ್ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದ ಛೋಟಾ ರಾಜನ್ ಗೆ ಕೊರೊನಾ ಸೋಂಕು ದೃಡಪಟ್ಟ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಛೋಟಾ ರಾಜನ್ ಸಾವನ್ನಪ್ಪಿರುವುದಾಗಿ ಏಮ್ಸ್ ಆಸ್ಪತ್ರೆ ತಿಳಿಸಿದೆ.

ಭೂಗತ ಪಾತಕಿ ಛೋಟಾ ರಾಜನ್ ನನ್ನು 2015ರಲ್ಲಿ ಇಂಡೋನೇಷ್ಯಾದಲ್ಲಿ ಭಾರತದ ಅಧಿಕಾರಿಗಳು ಬಂಧಿಸಿದ್ದರು. ಆತನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಭಯೋತ್ಪಾದನೆ ತಡೆ ಕಾಯ್ದೆ ಹಾಗೂ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಆತನ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

No Comments

Leave A Comment