Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಕಡಪದ ಕಲ್ಲು ಗಣಿಯಲ್ಲಿ ಸ್ಫೋಟ: 10 ಕಾರ್ಮಿಕರ ದುರ್ಮರಣ

ಆಂಧ್ರಪ್ರದೇಶ: ಆಂಧ್ರಪ್ರದೇಶದ ಕಡಪದ ಕಲ್ಲುಗಣಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 10ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ಮಾಮಿಲ್ಲಪಲ್ಲೆ ಗ್ರಾಮದ ಸಮೀಪ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಜಿಲೆಟಿನ್ ಕಡ್ಡಿಗಳನ್ನು ಅನ್ಲೋಡ್ ಮಾಡುವ ವೇಳೆ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಅನುಮತಿ ಪಡೆದೇ ಸ್ಥಳದಲ್ಲಿ ಗಣಿಗಾರಿಕೆ ನಡೆಸಲಾಗುತ್ತಿತ್ತು. ಜಿಲೆಟಿನ್ ಕಡ್ಡಿಗಳನ್ನು ಬುದ್ವೆಲ್ ನಿಂದ ತರಲಾಗಿದ್ದು, ಈ ಜಿಲೆಟಿನ್ ಕಡ್ಡಿಗಳನ್ನು ಅನ್ಲೋಡ್ ಮಾಡುವ ವೇಳೆ ಸ್ಫೋಟ ಸಂಭವಿಸಿದೆ ಎಂದು ಕಡಪ ಜಿಲ್ಲೆಯ ಪೊಲೀಸ್ ಅಧಿಕಾರಿ ಕೆ.ಎ.ಅನ್ಬುರಾಜನ್ ಅವರು ಹೇಳಿದ್ದಾರೆ.

ಸ್ಪೋಟದಿಂದ ಬಲಿಯಾದವರಲ್ಲಿ ಹೆಚ್ಚಿನವರು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸ್ಥಳೀಯ ಗ್ರಾಮವಾದ ಪುಲಿವೆಂಡುಲ ಮೂಲದವರು ಎಂದು ಹೇಳಲಾಗುತ್ತಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿಯವರು ಕಡಪ ಜಿಲ್ಲೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ, ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರ ಕುರಿತು ತೀವ್ರ ಸಂತಾಪ ಸೂಚಿಸಿದ್ದಾರೆ.

No Comments

Leave A Comment