Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಕಾಬೂಲ್‌ ಶಾಲೆ ಬಳಿ ಬಾಂಬ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 50ಕ್ಕೆ ಏರಿಕೆ

ಅಫ್ಘಾನಿಸ್ತಾನ್: ಕಾಬೂಲ್ ಶಾಲೆ ಬಳಿ ಬಾಂಬ್ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ ಭಾನುವಾರ 50ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಶುಕ್ರವಾರ ಸಂಜೆ 4.30 ರ ಸುಮಾರಿಗೆ ಸಯೀದ್ ಉಲ್ ಶುಹಾದಾ ಬಾಲಕಿಯರ ಶಾಲೆಯೊಂದರ ಬಳಿ ಬಾಂಬ್ ಸ್ಪೋಟಗೊಂಡಿತ್ತು.

ಉಗ್ರರು ಹೆಣ್ಣುಮಕ್ಕಳ ಶಾಲೆಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದರು. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ವಿದ್ಯಾರ್ಥಿನಿಯರೇ ಇದ್ದು, ಶಾಲೆಯ ಹಲವು ಅಧಿಕಾರಿಗಳು ಸಹ ಇದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಇದೀಗ ಸಾವಿನ ಸಂಖ್ಯೆ 50ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.

ಇನ್ನು ದಾಳಿಯ ಜವಾಬ್ದಾರಿಯನ್ನು ಯಾವುದೇ ಗುಂಪು ವಹಿಸಿಕೊಂಡಿಲ್ಲ ಎನ್ನಲಾಗುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

No Comments

Leave A Comment