Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ರಂಗಕರ್ಮಿ ಆರ್‌.ಎಸ್‌. ರಾಜಾರಾಂ ಕೋವಿಡ್‌ಗೆ ಬಲಿ

ಬೆಂಗಳೂರು: ರಾಜ್ಯ ಹಣಕಾಸು ಇಲಾಖೆಯ ಅಧೀನ ಕಾರ್ಯದರ್ಶಿ, ವೇದಿಕೆ ಫೌಂಡೇಷನ್ ಸಂಸ್ಥೆಯ ರೂವಾರಿ ಹಾಗೂ ರಂಗಕರ್ಮಿ ಆರ್‌.ಎಸ್‌.ರಾಜಾರಾಂ ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಜಾರಾಂ ಅವರು 1972ರಿಂದ ‘ನಟರಂಗ’ ಮತ್ತು 1983ರಿಂದ ‘ವೇದಿಕೆ’ ಯ ರಂಗ ಚಟುವಟಿಕೆಗಳಲ್ಲಿ ತೊಡಗಿ ಸಿ.ಆರ್. ಸಿಂಹ ಅವರ ನಿರ್ದೇಶನದಲ್ಲಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದರು.

ಇದಲ್ಲದೆ ಬಿ.ವಿ. ಕಾರಂತ, ಎಂ.ಎಸ್‌. ಸತ್ಯು, ಶ್ರೀನಿವಾಸ್‌ ಜಿ. ಕಪ್ಪಣ್ಣ, ಜಯತೀರ್ಥ ಜೋಶಿ, ಸಿ.ಎಚ್‌. ಲೋಕನಾಥ್‌, ಆರ್. ನಾಗೇಶ್‌, ಪ್ರಕಾಶ್‌ ಬೆಳವಾಡಿ ಮುಂತಾದವರ ನಿರ್ದೇಶನದಲ್ಲಿ ಮಂಡೋದರಿ, ವಿಗಡವಿಕ್ರಮರಾಯ, ಎಚ್ಚಮನಾಯಕ, ಟಿಪ್ಪುಸುಲ್ತಾನ್‌, ಕಿತ್ತೂರು ಚೆನ್ನಮ್ಮ, ರಕ್ತಾಕ್ಷಿ, ಸದಾರಮೆ, ಕಾಕನ ಕೋಟೆ, ತುಘಲಕ್, ಮೃಚ್ಛಕಟಿಕ, ಸಂಕ್ರಾಂತಿ, ಅಗ್ನಿ ಮತ್ತು ಮಳೆ ಮುಂತಾದ ನಾಟಕಗಳಲ್ಲಿ ಅಭಿನಯಿಸಿದ್ದರು.

ಹೈದರಾಬಾದ್‌, ಚೆನ್ನೈ, ಕೋಲ್ಕತ್ತಾ, ಕಾಶ್ಮೀರ ಮುಂಬಯಿ, ಚಂಡಿಗರ್ ಮುಂತಾದೆಡೆ ನಾಟಕ ಪ್ರದರ್ಶನದಲ್ಲಿ ಭಾಗಿಯಾದರು. ಹಲವಾರು ಚಲನ ಚಿತ್ರಗಳು, ಅಸಂಖ್ಯಾತ ಧಾರಾವಾಹಿಗಳಲ್ಲಿ ಅಭಿನಯಿಸಿದ್ದು, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು. ಅಲ್ಲದೆ ಹಲವಾರು ಪುರಸ್ಕಾರಗಳನ್ನು ಪಡೆದಿದ್ದರು.

No Comments

Leave A Comment