ಲಸಿಕೆ ಕೇಂದ್ರಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಭೇಟಿ
ಉಡುಪಿ: 18ರಿಂದ 45 ವರ್ಷದೊಳಗಿನವರಿಗೆ ಪ್ರಥಮ ಡೋಸ್ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸೋಮವಾರ ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ ಮೊಮೋರಿಯಲ್ ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.
ಲಸಿಕೆ ಕೇಂದ್ರಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು. ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಆಸ್ಪತ್ರೆ ಆಡಳಿತ ಮಂಡಳಿಯ ಜೋಯ್ ಗೋಮ್ಸ್, ನೀತಾ ಶೆಟ್ಟಿ, ಫಾರ್ಮಸಿಸ್ಟ್ ಕಾರ್ತಿಕ್ ಶೆಟ್ಟಿ, ದಾದಿ ವಿನಯ, ಆತ್ರಾಡಿ ಗ್ರಾ. ಪಂ. ಉಪಾಧ್ಯಕ್ಷ ರತ್ನಾಕರ ಶೆಟ್ಟಿ ಇದ್ದರು.