Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಮಾಜಿ ಸಿಬಿಐ ಅಧಿಕಾರಿ ಕೊರೋನಾಗೆ ಬಲಿ

ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಮಾಜಿ ಅಧಿಕಾರಿ ಕೆ ರಗೋಥಮನ್ ಅವರು ಬುಧವಾರ ಮಹಾಮಾರಿ ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ.

76 ವರ್ಷದ ರಗೋಥಮನ್ ಅವರಿಗೆ ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಹೀಗಾಗಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಸಿಬಿಐ ಮಾಜಿ ಅಧಿಕಾರಿ ಕೆ ರಗೋಥಮನ್ ಅವರಿಗೆ ನಾಲ್ಕು ಮಕ್ಕಳಿದ್ದು, ಅವರ ಪತ್ನಿ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದಾರೆ.

ರಗೋಥಮನ್ ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡದಲ್ಲಿದ್ದರು. ಅವರು ಹಲವಾರು ಪುಸ್ತಕಗಳನ್ನು ಬರೆದಿದ್ದು, ಸಿಬಿಐನಲ್ಲಿ ಪೊಲೀಸ್ ಅಧೀಕ್ಷಕರಾಗಿ ನಿವೃತ್ತರಾಗಿದ್ದರು.

No Comments

Leave A Comment