Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಕ್ಲಬ್ ನಲ್ಲಿ ಹಲ್ಲೆ ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿ ವಿರುದ್ಧ ಎಫ್‍ಐಆರ್ ದಾಖಲು!

ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಮೇಲೆ ಹೊರಬಂದಿರುವ ನಟಿ ಸಂಜನಾ ಗಲ್ರಾನಿ ವಿರುದ್ಧ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದ ಎಫ್ ಐಆರ್ ದಾಖಲಾಗಿದೆ.

2019ರಲ್ಲಿ ಕ್ಲಬ್ ಒಂದರಲ್ಲಿ ನಡೆದ ಗಲಾಟೆಯಲ್ಲಿ ವಂದನಾ ಜೈನ್ ಮೇಲೆ ಸಂಜನಾ ಹಲ್ಲೆ ನಡೆಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಅವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಡ್ರಗ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಅನಾರೋಗ್ಯಕ್ಕೀಡಾಗಿದ್ದ ಸಂಜನಾ ಚೇತರಿಸಿಕೊಂಡು ಕೊರೋನಾದಿಂದ ಸಂಕಷ್ಟಕ್ಕೀಡಾದವರಿಗೆ ಊಟ ವಿತರಿಸುವ ಕೆಲಸ ಮಾಡುತ್ತಿದ್ದಾರೆ. ಇದರ ನಡುವೆ ಹಳೇ ಪ್ರಕರಣದಲ್ಲಿ ಸಿಲುಕಿದ್ದಾರೆ.

No Comments

Leave A Comment