ಹಡಿಲು ಭೂಮಿ ಕೃಷಿ ಅಂದೋಲನ” ನೀಲಾವರ ಪಂಚಾಯತ್ ವ್ಯಾಪ್ತಿಯ ಕೃಷಿ ಮಾಡಲು ತಯಾರಿ ಸ್ಥಳ ವೀಕ್ಷಣೆ
ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಅಂದೋಲನ” ದಡಿ ನೀಲಾವರ ಪಂಚಾಯತ್ ವ್ಯಾಪ್ತಿಯಲ್ಲಿ ಹಡಿಲು ಕೃಷಿ ಭೂಮಿಗಳನ್ನು ಕೃಷಿ ಮಾಡಲು ನಡೆಸಿದ ತಯಾರಿ ಬಗ್ಗೆ ಶಾಸಕ ಕೆ ರಘುಪತಿ ಭಟ್ ಅವರು ಮ೦ಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈಗಾಗಲೇ ತೋಡುಗಳ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಸ್ಥಳೀಯ ಕೃಷಿಕರಿಗೆ ಕೃಷಿ ಮಾಡಲು ಉತ್ತೇಜನ ನೀಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಸಹಕಾರ ನೀಡಲಾಗುತ್ತಿದೆ. ಸ್ಥಳೀಯ ಕೃಷಿಕರು, ಊರಿನ ಹಿರಿಯರು, ಭೂ ಮಾಲಕರು ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು ಇನ್ನಷ್ಟು ಹೆಚ್ಚು ಹೆಚ್ಚು ಹಡಿಲು ಭೂಮಿಗಳನ್ನು ಕೃಷಿ ಮಾಡಲು ಶಾಸಕರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ, ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಕುಮಾರ್, ಮುಖಂಡರಾದ ಕಮಲಾಕ್ಷ ಹೆಬ್ಬಾರ್, ಹರೀಶ್ ಶೆಟ್ಟಿ ಚೇರ್ಕಾಡಿ ಹಾಗೂ ಸ್ಥಳೀಯ ಕೃಷಿಕರು ಉಪಸ್ಥಿತರಿದ್ದರು.