Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಅಪ್ಪಳಿಸಲಿದೆ ಮೇ 23ರಿಂದ ಮತ್ತೊಂದು ಚಂಡಮಾರುತ “ಯಾಸ್”

ನವದೆಹಲಿ: ಗುಜರಾತ್ ಹಾಗೂ ಮಹಾರಾಷ್ಟ್ರ ಒಳಗೊಂಡಂತೆ ಹಲವು ರಾಜ್ಯಗಳಲ್ಲಿ ತೌಕ್ತೆ ಚಂಡಮಾರುತ ಆರ್ಭಟ ತೋರಿರುವ ಬೆನ್ನಲ್ಲೇ ಮತ್ತೊಂದು ಚಂಡಮಾರುತ ಅಪ್ಪಳಿಸುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಈ ಚಂಡಮಾರುತ ದೇಶದ ಪೂರ್ವ ಹಾಗೂ ದಕ್ಷಿಣ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಲಿದೆ ಎಂದು ಮುನ್ಸೂಚನೆ ನೀಡಿದೆ.

ಮೇ 23ರಿಂದ ಚಂಡಮಾರುತದ ಪ್ರಭಾವ….
ಮೇ 23ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಚಂಡಮಾರುತಕ್ಕೆ ಯಾಸ್ ಎಂದು ಹೆಸರಿಡಲಾಗಿದೆ. ಈ ಚಂಡಮಾರುತದ ಕುರಿತು ಹವಾಮಾನ ಇಲಾಖೆ ಚಂಡ ಮಾರುತ ವಿಭಾಗದ ಮುಖ್ಯಸ್ಥೆ ಸುನೀತಾ ದೇವಿ ಮಾಹಿತಿ ನೀಡಿದ್ದು, “ಮುಂದಿನ ವಾರ ಬಂಗಾಳ ಕೊಲ್ಲಿಯಲ್ಲಿ ಒತ್ತಡ ನಿರ್ಮಾಣವಾಗಬಹುದು. ಇದು ತೀವ್ರಗೊಳ್ಳುವ ಸಾಧ್ಯತೆಯ ಎಚ್ಚರಿಕೆ ನೀಡಲಾಗಿದೆ” ಎಂದಿದ್ದಾರೆ.

No Comments

Leave A Comment