Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ತಾಯಿಗೆ ಚಿಕಿತ್ಸೆ ಕೊಡಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದ ಮಾಜಿ ಮಹಿಳಾ ಕ್ರಿಕೆಟರ್ ಕೆಎಸ್ ಶ್ರವಂತಿಗೆ ವಿರಾಟ್ ಕೊಹ್ಲಿ ನೆರವು

ನವದೆಹಲಿ: ಟೀಂ ಇಂಡಿಯಾ ಮಹಿಳಾ ತಂಡದ ಮಾಜಿ ಆಟಗಾರ್ತಿ ಕೆಎಸ್ ಶ್ರವಂತಿ ನಾಯ್ಡು ಅವರ ತಾಯಿ ಕೊರೋನಾ ಸೋಂಕಿಗೆ ತುತ್ತಾಗಿದ್ದು ಚಿಕಿತ್ಸೆ ಕೊಡಿಸಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದ ಶ್ರವಂತಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಹಾಯಹಸ್ತ ಚಾಚಿದ್ದಾರೆ.

ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಶ್ರವಂತಿಗೆ ಆರ್ಥಿಕ ನೆರವಿನ ಅಗತ್ಯವಿದೆ ಎಂಬ ಸಂದೇಶಗಳು ಹರಿದಾಡುತ್ತಿದ್ದವು. ಇನ್ನು ಶ್ರವಂತಿ ಸಹ ಈಗಾಗಲೇ ತಾಯಿ ಚಿಕಿತ್ಸೆಗಾಗಿ 16 ಲಕ್ಷ ರೂಪಾಯಿ ಖರ್ಚು ಮಾಡಿದ್ದರು.

ಕೈಯಲ್ಲಿ ಹಣವಿಲ್ಲದೆ ಶ್ರವಂತಿ ಸಂಕಷ್ಟಕ್ಕೆ ಸಿಲುಕಿದ್ದರು. ಈ ವಿಚಾರವನ್ನು ಟೀಂ ಇಂಡಿಯಾ ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರು ಕೊಹ್ಲಿಯ ಗಮನಕ್ಕೆ ತಂದಿದ್ದರು. ಇದರ ಬೆನ್ನಲ್ಲೇ ಕೊಹ್ಲಿ 6.77 ಲಕ್ಷ ರುಪಾಯಿ ನೀಡಿದ್ದಾರೆ. ಅಲ್ಲದೆ ಹೈದರಾಬಾದ್ ಕ್ರಿಕೆಟ್ ಸಂಸ್ಥೆಯೂ ಸಹ ಶ್ರವಂತಿ ಪೋಷಕರ ಚಿಕಿತ್ಸೆಗಾಗಿ 5 ಲಕ್ಷ ರುಪಾಯಿ ನೆರವು ನೀಡಿದ್ದಾರೆ ಎನ್ನಲಾಗಿದೆ.

No Comments

Leave A Comment