Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ನಟ ‘ದರ್ಶನ್’ ಒಂದು ಮಾತಿಗೆ ಭರಪೂರ ಪ್ರತಿಕ್ರಿಯೆ: ಮೃಗಾಲಯ ಪ್ರಾಣಿಗಳ ದತ್ತು ಪಡೆದ ಪ್ರಾಣಿಪ್ರಿಯರು!

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ರಾಜ್ಯದ ಮೃಗಾಲಯಗಳಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವಂತೆ ನಟ ದರ್ಶನ್‌ ನೀಡಿದ್ದ ಕರೆಗೆ ಪ್ರಾಣಿ ಪ್ರಿಯರಿಂದ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ.

ಅರಣ್ಯ ಇಲಾಖೆ ರಾಯಭಾರಿಯಾಗಿರುವ ನಟ ದರ್ಶನ್‌ ಅವರಿಗೆ ಪ್ರಾಣಿಗಳೆಂದರೆ ಅಚ್ಚುಮೆಚ್ಚು. ಈಗಾಗಲೇ ಮೈಸೂರು ಮೃಗಾಲಯದಲ್ಲಿ ಹಲವು ಪ್ರಾಣಿಗಳನ್ನು ದತ್ತು ಪಡೆದಿರುವ ದರ್ಶನ್‌, ಕೋವಿಡ್‌ನ ಈ ಸಂಕಷ್ಟದ ಸಂದರ್ಭದಲ್ಲಿ ಜನರೂ ತಮ್ಮ ಹತ್ತಿರದ ಮೃಗಾಲಯಗಳಲ್ಲಿ ಇರುವ ಪ್ರಾಣಿಗಳನ್ನು ದತ್ತುಪಡೆಯಲು ಕರೆ ನೀಡಿದ್ದರು.

ಕೋವಿಡ್‌ ಮಹಾಮಾರಿಯಿಂದ ಮಾನವಕುಲಕ್ಕೆ ಎಷ್ಟು ತೊಂದರೆ ಆಗಿದೆಯೋ ಅಷ್ಟೇ ತೊಂದರೆ ಪ್ರಾಣಿಸಂಕುಲಕ್ಕೂ ಆಗಿದೆ. ಕರ್ನಾಟಕದಲ್ಲಿ 9 ಮೃಗಾಲಯಗಳಿದ್ದು, ಇವುಗಳಲ್ಲಿ 5 ಸಾವಿರ ಪ್ರಾಣಿಗಳಿವೆ. ಇವುಗಳನ್ನು ನೋಡಲು ದೇಶದಾದ್ಯಂತದಿಂದ ಜನರು ಬರುತ್ತಿದ್ದರು. ಅವರು ಪಡೆಯುತ್ತಿದ್ದ ಟಿಕೆಟ್‌ನಿಂದ ಸಂಗ್ರಹವಾಗುತ್ತಿದ್ದ ಹಣದಿಂದ ಈ ಪ್ರಾಣಿಗಳಿಗೆ ಆಹಾರ, ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗೆ ವೇತನ ನೀಡಲಾಗುತ್ತಿತ್ತು. ಕೋವಿಡ್‌ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಈ ಮೃಗಾಲಯಗಳು ಸಂಕಷ್ಟದಲ್ಲಿವೆ’ ಎಂದಿದ್ದರು.

ಮೈಸೂರು ಮೃಗಾಲಯಕ್ಕೆ ಪ್ರಾಣಿಗಳಿಗೆ ಆಹಾರ ನೀಡಲು ಮತ್ತು ಅವುಗಳ ನಿರ್ವಹಣೆಗಾಗಿ ವರ್ಷಕ್ಕೆ ಸುಮಾರು 4.5 ಕೋಟಿ ರೂ.ಹಣ ಬೇಕಾಗಿದೆ. ಪ್ರಾಣಿಗಳ ದತ್ತು ಪಡೆಯುವುದರಿಂದ ಹೊರೆ ತಗ್ಗಿಸುತ್ತದೆ. ಮಾನವರು ತಮ್ಮ ಕಷ್ಟಗಳನ್ನು ವ್ಯಕ್ತಪಡಿಸಬಹುದು ಮತ್ತು ಹೆಚ್ಚಿನ ಹಣ ಅಥವಾ ಆಹಾರವನ್ನು ಕೇಳಬಹುದು. ಪ್ರಾಣಿಗಳು ತಮ್ಮ ಹಸಿವನ್ನು ಯಾವ ರೀತಿಯಲ್ಲಿ ವ್ಯಕ್ತಪಡಿಸುತ್ತವೆ? ಮಾನವರಾದ ನಾವು ಅವುಗಳಿಗೆ ಪರಿಹಾರ ನೀಡಬೇಕು ಎಂದು ದರ್ಶನ್ ಹೇಳಿದ್ದರು.

ಪ್ರಾಣಿಗಳ ದತ್ತು ವಿಷಯದಲ್ಲಿ ವೀಡಿಯೊ ನೋಡಿದ ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬರುತ್ತಿದೆ. ಮೃಗಾಲಯದ ಅಧಿಕಾರಿಗಳು ಅವುಗಳನ್ನು ನಿರ್ವಹಿಸಲು ಕಷ್ಟಪಡುತ್ತಿದ್ದರೆ ಪ್ರಾಣಿಗಳನ್ನು ಕಾಡಿಗೆ ಬಿಡುಗಡೆ ಮಾಡಬಹುದು ಎಂದು ಕೆಲವರು ಸಲಹೆ ನೀಡಿದ್ದಾರೆ.

ಮೃಗಾಲಯದ ಪ್ರಾಣಿಗಳನ್ನು ಬಿಡುವಂತಹ ಈ ಕಾಡುಗಳು ಎಲ್ಲಿವೆ ಎಂದು ನಾನು ಜನರನ್ನು ಕೇಳಲು ಬಯಸುತ್ತೇನೆ. ನಾವು ಪ್ರಾಣಿಗಳ ಆವಾಸಸ್ಥಾನವನ್ನು ಸ್ವಾಧೀನಪಡಿಸಿಕೊಂಡಿದ್ದೇವೆ. ನಾನು ಸ್ವಲ್ಪವೇ ಓದಿದ್ದೇನೆ ಮತ್ತು ಕಲಿತಿದ್ದೇನೆ, ಪ್ರಾಣಿಸಂಗ್ರಹಾಲಯಗಳಲ್ಲಿ ವಾಸಿಸುವ ಪ್ರಾಣಿಗಳು ಕಾಡಿನಲ್ಲಿ ಬದುಕಲು ಸಾಧ್ಯವಿಲ್ಲ ಎಂದು ದರ್ಶನ್ ಹೇಳಿದ್ದಾರೆ.

ಸಹಾಯ ಮಾಡಲು ಮುಂದೆ ಬಂದ ಜನರಿಗೆ ದರ್ಶನ್ ಕೃತಜ್ಞತೆ ತಿಳಿಸಿದ್ದಾರೆ. ಒಂದಾನೊಂದು ಕಾಲದಲ್ಲಿ ಹುಲಿ ಮತ್ತು ಜಿರಾಫೆ ಜೀವಿಸಿದ್ದವು ಎಂದು ನಾವು ಹೇಳುವ ಕಾಲ ಬರಲಾರದು ಎಂದು ನಾನು ಬಾವಿಸುತ್ತೇನೆ, ಈ ಸಂಕಷ್ಟ ಕಾಲದಲ್ಲಿ ನಾವು ಪರಸ್ಪರರಿಗೆ ಜೊತೆಯಾಗಿ ನೆರವಿಗೆ ನಿಲ್ಲೋಣ, ಹಾಗೂ ಪ್ರಾಣಿ ಸಂಕುಲವನ್ನು ರಕ್ಷಿಸೋಣ ಎಂದು ದರ್ಶನ್ ತಿಳಿಸಿದ್ದಾರೆ.

No Comments

Leave A Comment