Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಉಡುಪಿ: ರೈಲು ಹಳಿಯಲ್ಲಿ ಛಿದ್ರಗೊಂಡಿರುವ ಶವ ಪತ್ತೆ; ಆತ್ಮಹತ್ಯೆ ಶಂಕೆ

ಉಡುಪಿ: ದೊಡ್ಡಣಗುಡ್ಡೆ ಮೂಡಸಗ್ರಿ ಸಮೀಪದ ರೈಲು ಹಳಿಯಲ್ಲಿ ಗಂಡಸಿನ ಕಳೇಬರ ಛಿದ್ರಗೊಂಡಿರುವ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ. ರಾತ್ರಿ ಸಂಚರಿಸುವ ಗೂಡ್ಸ್ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿ ಇಡಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ವಾರೀಸುದಾರರು ಮಣಿಪಾಲ ಠಾಣೆಯ ನಾಗರಿಕ ಸಹಾಯ ಕೇಂದ್ರ ಸಂಪರ್ಕಿಸಲು ಸೂಚಿಸಲಾಗಿದೆ.

ಮೃತದೇಹವನ್ನು ಶವಾಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು, ಜೀವನ್ ಇಂದ್ರಾಳಿ, ಸಿದ್ಧಾರ್ಥ ಬೈಲೂರು ಇಲಾಖೆಗೆ ಸಹಕರಿಸಿದರು.

No Comments

Leave A Comment