Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

‘ಜಿಲ್ಲಾವಾರು ಕೊರೊನಾ ಪರಿಸ್ಥಿತಿಯನ್ನು ಗಮನಿಸಿ ಲಾಕ್‌ಡೌನ್ ಸಡಿಲಿಕೆ’ – ಸಚಿವ ಬೊಮ್ಮಾಯಿ

ಹಾವೇರಿ, ಜೂ.07:”ಜಿಲ್ಲಾ ಮಟ್ಟದಲ್ಲಿ ಇರುವ ಕೊರೊನಾ ಸೋಂಕಿನ ಪರಿಸ್ಥಿತಿಯನ್ನು ಗಮನಿಸಿ ಜೂನ್ 14ರ ನಂತರ ಯಾವ ರೀತಿ ಲಾಕ್‌ಡೌನ್ ಸಡಿಲಿಕೆ ಮಾಡಬೇಕು ಎಂಬುದರ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರ ಆಗಲಿದೆ” ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಲಾಕ್‌ಡೌನ್ ಸಡಿಲಿಕೆಗೆ ಸಂಬಂಧಿಸಿದಂತೆ ಈಗಾಗಲೇ ಅನೇಕ ಸಲಹೆ-ಸೂಚನೆಗಳು ಬರುತ್ತಿದ್ದು, ಎಲ್ಲಿ ಪಾಸಿಟಿವಿಟಿ ರೇಟ್ ಕಡಿಮೆ ಇದೆ? ಯಾವ ಜಿಲ್ಲೆಯಲ್ಲಿ ಕಡಿಮೆ ಇದೆ ? ಅಂತಹ ಜಿಲ್ಲೆಗಳಲ್ಲಿ ಸಡಿಲಿಕೆ ಕ್ರಮ ಗಳನ್ನು ಜರುಗಿಸಬೇಕು ಎಂಬ ಸಲಹೆ ಬಂದಿದೆ” ಎಂದರು.

ಇನ್ನು “ಕೈಗಾರಿಕಾ ವಲಯದಿಂದಲೂ ಅನೇಕ ಸಲಹೆಗಳು ಬಂದಿದ್ದು, ಬೆಂಗಳೂರು ನಗರ ಸೇರಿದಂತೆ ಜಿಲ್ಲಾವಾರು ಕೊರೊನಾ ವಸ್ತುಸ್ಥಿತಿಯನ್ನು ಪರಿಶೀಲನೆ ಮಾಡಿ ಅಂತಿಮವಾಗಿ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ” ಎಂದಿದ್ದಾರೆ.

“ರಾಜೀನಾಮೆ ನೀಡುತ್ತೇನೆ ಎಂಬ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಯಾಗಿದ್ದು, ಯಡಿಯೂರಪ್ಪ ಅವರೇ ನಮ್ಮ ಸರ್ವಸಮ್ಮತ ನಾಯಕರು ಅದರಲ್ಲಿ ಯಾವುದೇ ಪ್ರಶ್ನೆಗಳಿಲ್ಲ” ಎಂದು ಹೇಳಿದ್ದಾರೆ.

No Comments

Leave A Comment