Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಬಿಜೆಪಿ ಹಿರಿಯ ಶಾಸಕ ಸಿ.ಎಂ ಉದಾಸಿ ನಿಧನ: ಸಿಎಂ ಬಿಎಸ್ವೈ ಸೇರಿ ಗಣ್ಯರ ಸಂತಾಪ

ಬೆಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಶಿವಕುಮಾರ್ ಚನ್ನದಾಸಪ್ಪ ಉದಾಸಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ 81 ವರ್ಷದ ಸಿ.ಎಂ ಉದಾಸಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳ ಕೊನೆಯ ವಾರದಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಉದಾಸಿ ಚಿಕಿತ್ಸೆ ಪಡೆಯುತ್ತಿದ್ದರು.

ನಾಳೆ ಹಾವೇರಿಯ ಹಾನಗಲ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಉದಾಸಿ ಪುತ್ರ ಶಿವಕುಮಾರ್ ಉದಾಸಿ ತಿಳಿಸಿದ್ದಾರೆ.

ಸಿ.ಎಂ ಉದಾಸಿ ನಿಧನಕ್ಕೆ ಮುಖ್ಯ ಮಂತ್ರಿಗಳ ಸಂತಾಪ :-

ಹಿರಿಯ  ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿ.ಎಂ ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು   ಹಾನಗಲ್  ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಅವರ ನಿಧನದಿಂದ  ಅಪರೂಪದ ನೇತಾರರೊಬ್ಬರನ್ನು  ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ.  ಭಗವಂತ ಅವರ  ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಬಿಜೆಪಿ ಸಚಿವ ಬಸವರಾಜ ಬೊಮ್ಮಾಯಿ, ಕೆಎಸ್ ಈಶ್ವರಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

No Comments

Leave A Comment