Log In
BREAKING NEWS >
ಲಾಕ್ ಡೌನ್ ಒಪನ್- ಮಾಸ್ಕ್, ಅ೦ತರ ಪಾಲನೆ ತಪ್ಪದೇ ಅನುಸರಿಸಿ....

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ನಟಿ ರಮ್ಯಾ ಬೇಸರ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಬಯೋಪಿಕ್ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಆಕೆಯನ್ನು ಮೈಸೂರಿನಿಂದ ವರ್ಗಾವಣೆಗೊಳಿಸಿರುವ ಕುರಿತು ನಟಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ ಸ್ಟಾಗ್ರಾಮ್ ನಲ್ಲಿ ಪ್ರತಿಕ್ರಿಯಿಸಿರುವ ರಮ್ಯಾ ”ಪ್ರಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ಇಂದಿನ ರಾಜಕೀಯ ಪ್ರೋತ್ಸಾಹಿಸುವುದಿಲ್ಲ” ಎಂದಿದ್ದಾರೆ.

ಇದೇ ವೇಳೆ ರೋಹಿಣಿ ಸಿಂಧೂರಿಯವರ ಕಾರ್ಯವೈಖರಿ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿ, ”ಸಿಂಧೂರಿ ಕಾರ್ಯ ವೈಖರಿಯನ್ನು ನಾನು ಅಂದು ಮೆಚ್ಚಿದ್ದೇನೆ, ಈಗಲೂ ಮೆಚ್ಚಿಕೊಳ್ಳುತ್ತೇನೆ. ಆದರೆ ಇಂದಿನ ರಾಜಕೀಯ, ಉತ್ತಮ ಕೆಲಸಗಳನ್ನು, ಪ್ರಮಾಣಿಕ ಅಧಿಕಾರಿಗಳನ್ನು ಪ್ರೋತ್ಸಾಹಿಸುತ್ತಿಲ್ಲ ಹಾಗೂ ಬೆಂಬಲಿಸುತ್ತಿಲ್ಲ” ಎಂದಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಮತ್ತು ಡಿಸಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ವರ್ಗಾವಣೆಯಲ್ಲಿ ಅಂತ್ಯ ಕಂಡಿದೆ. ರೋಹಿಣಿ ಸಿಂಧೂರಿ ಅವರನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರನ್ನಾಗಿ ನೇಮಿಸಿದ್ರೆ, ಶಿಲ್ಪಾ ನಾಗ್‌ರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇ-ಆಡಳಿತ ವಿಭಾಗದ ನಿರ್ದೇಶಕರಾಗಿ ಅಧಿಕಾರ ನೀಡಲಾಗಿದೆ.

ರೋಹಿಣಿ ಸಿಂಧೂರಿ ವರ್ಗಾವಣೆ ಬಳಿಕ ಅವರ ಕುರಿತು ಸಿನಿಮಾ ಮಾಡುವ ಬಗ್ಗೆ ಸಿನಿಮಾ ಇಂಡಸ್ಟ್ರಿಯಲ್ಲಿ ಚರ್ಚೆಗಳು ನಡೆಯುತ್ತಿದೆ. ನಾಲ್ವಡಿ ಕೃಷ್ಣರಾಜ್ ಒಡೆಯರ್ ಫಿಲಂಸ್ ಸಂಸ್ಥೆ ಈ ಚಿತ್ರ ನಿರ್ಮಿಸಲು ಚಿಂತನೆ ನಡೆಸಿದ್ದು, ಬಿಗ್ ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ ನಟಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

No Comments

Leave A Comment