Log In
BREAKING NEWS >
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಕಚೇರಿ ಉದ್ಘಾಟನೆ-ವಿವಿಧ ಸಮಿತಿಗಳ ಪಟ್ಟಿ ಪ್ರಕಟ...

ಕುಂದಾಪುರ: ಯಡಮೊಗೆ ಕೊಲೆ‌ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ, ಬಂಧಿತರ ಸಂಖ್ಯೆ 4 ಕ್ಕೆ ಏರಿಕೆ

ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಯಡಮೊಗೆ ನಿವಾಸಿ ಮನೋಜ್ ಕುಮಾರ್ (26) ಬಂಧಿತ ಆರೋಪಿ. ಆರೋಪಿ ಮನೋಜ್ ಕುಮಾರ್ ನನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಜೂನ್ 29 ರ ತನಕ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಶನಿವಾರ ರಾತ್ರಿ ಪ್ರಾಣೇಶ್ ಯಡಿಯಾಳ್ ಹಾಗೂ ಆತನ‌ ತಂಡ ಉದಯ್ ಗಾಣಿಗ ಅವರ ಮೈಮೇಲೆ ಕಾರು ಹತ್ತಿಸಿ ಆ ಬಳಿಕ ದೊಣ್ಣೆಯಿಂದ ಹೊಡೆದು ಕೊಲೆಗಯ್ಯಲಾಗಿದೆ ಎಂದು ಉದಯ್ ಪತ್ನಿ‌ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೊಲೆ ಪ್ರಕರಣದ ಪ್ರಮುಖ ಆರೋಪಿ ಯಡಮೊಗೆ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು ಆದಿತ್ಯವಾರ ನಸುಕಿನ ಜಾವ ಪೊಲೀಸರು ಬಂಧಿಸಿದ್ದರು. ಸೋಮವಾರ ಪ್ರಾಣೇಶ್ ಯಡಿಯಾಳನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಪ್ರಕರಣದ ಎರಡನೇ ಆರೋಪಿ ರಾಜೇಶ್ ಭಟ್ ಹಾಗೂ ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ ಬಂಧಿತನಾಗಿದ್ದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್ ಗೆ ಜೂನ್ 29 ರ ತನಕ ನ್ಯಾಯಾಂಗ ಬಂಧನ ವಿಧಿಸಿದ್ದರು.

ಉದಯ್ ಗಾಣಿಗ ಕೊಲೆ‌ ಪ್ರಕರಣದಲ್ಲಿ ಇದೀಗ‌ ಬಂಧಿತರ ಸಂಖ್ಯೆ 4 ಕ್ಕೇರಿದ್ದು, ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

No Comments

Leave A Comment