Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಮಂಗಳೂರು: ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಪದ್ದು ಬಂಗೇರ ಕೊರೊನಾಗೆ ಬಲಿ

ಮಂಗಳೂರು, ಜೂ 10: ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಪದ್ದು ಬಂಗೇರ(74) ಅವರು  ಗುರುವಾರ ಕೊರೊನಾಗೆ ಬಲಿಯಾಗಿದ್ದಾರೆ.

ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು. ಚಿಕಿತ್ಸೆಗಾಗಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಇಂದು(ಗುರುವಾರ) ಉಡುಪಿಯಲ್ಲೇ ಅಂತ್ಯಕ್ರಿಯೆ ನೆರವೇರಲಿದೆ.

ಉಡುಪಿಯ ಬಡಾನಿಡಿಯೂರು ಮೂಲದ ಶೇಖರ್ ಪದ್ದು ಬಂಗೇರ ಅವರು ಭಾರತ ಫುಟ್ಬಾಲ್ ತಂಡದಲ್ಲಿ ಗೋಲ್ ಕೀಪರ್, ಕ್ಯಾಪ್ಟನ್ ಆಗಿದ್ದರು.

No Comments

Leave A Comment