Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿ: ಬಿ.ಎಸ್. ಯಡಿಯೂರಪ್ಪ

ಹಾಸನ: ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಹಾಸನದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಬಿಜೆಪಿ ರಾಷ್ಟ್ರೀಯ ನಾಯಕರು ನನ್ನ ಮೇಲೆ ವಿಶ್ಚಾಸವಿಟ್ಟು ರಾಜ್ಯ ಸರ್ಕಾರದ ನಾಯಕತ್ವದಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವೆ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರಣ್ ಸಿಂಗ್ ಅವರೇ ರಾಜ್ಯದ ನಾಯಕತ್ವದಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯಿಂದ ನನಗೆ 100ರಷ್ಟು ಬಲ ಬಂದಿದೆ ಎಂದು ತಿಳಿಸಿದ್ದಾರೆ.

ಅರುಣ್ ಸಿಂಗ್ ಅವರ ಹೇಳಿಕೆಯಿಂದ ರಾಜ್ಯದಲ್ಲಿ ಎದ್ದಿದ್ದ ನಾಯಕತ್ವದ ಗೊಂದಲ ಬಗೆಹರಿದಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇಟ್ಟಿರುವ ವಿಶ್ವಾಸ ಇಟ್ಟಿದ್ದಾರೆ. ಇದರಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಮೋದಿ ಹಾಗೂ ಅಮಿತ್ ಶಾ ಅವರ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವೆ. ಪ್ರಾಮಾಣಿಕವಾಗಿ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎಂದಿದ್ದಾರೆ.

No Comments

Leave A Comment