Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ನಟ ಸಂಚಾರಿ ವಿಜಯ್​​ಗೆ ಬೈಕ್ ಅಪಘಾತ; ಪ್ರಜ್ಞಾಹೀನ ಸ್ಥಿತಿಯಲ್ಲಿ ಸ್ಯಾಂಡಲ್​ವುಡ್​ ಹೀರೋ

2020ರಲ್ಲಿ ಸ್ಯಾಂಡಲ್​ವುಡ್​ ಸಾಕಷ್ಟು ನೋವು ತಿಂದಿದೆ. ಇದು ಈಗ 2021ಕ್ಕೂ ವಿಸ್ತರಣೆ ಆದಂತೆ ಕಾಣುತ್ತಿದೆ. ಸ್ಯಾಂಡಲ್​ವುಡ್​ನಲ್ಲಿ ಭಿನ್ನ ನಟನೆ ಮೂಲಕ ಗುರುತಿಸಿಕೊಂಡ ನಟ ಸಂಚಾರಿ ವಿಜಯ್​ ಅವರು ಅಪಘಾತಕ್ಕೆ ತುತ್ತಾಗಿದ್ದಾರೆ. ಬೈಕ್​ನಲ್ಲಿ ಸಂಚಾರ ಮಾಡುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

ಶನಿವಾರ (ಜೂನ್​ 12) ರಾತ್ರಿ ಬೈಕ್​ ಅಪಘಾತ ಸಂಭವಿಸಿದೆ. ಅವರನ್ನು ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೆದುಳಿನ ಬಲ ಭಾಗದಲ್ಲಿ ರಕ್ತಸ್ರಾವ ಉಂಟಾಗಿದ್ದು, ತೊಡೆಯಲ್ಲಿ ಗಾಯಗಳಾಗಿವೆ. ನಿನ್ನೆ ರಾತ್ರಿಯೇ ಅವರಿಗೆ ವೈದ್ಯರು ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

No Comments

Leave A Comment