Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಉಡುಪಿ: ನಿವೃತ್ತ ಸೇನಾಧಿಕಾರಿ ಕರ್ನಲ್ ರಾಮಚಂದ್ರ ರಾವ್ ನಿಧನ

ಉಡುಪಿ, ಜೂ.15: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೇನಾಧಿಕಾರಿ, ಸಮಾಜ ಸೇವಕ ಕರ್ನಲ್ ರಾಮಚಂದ್ರ ರಾವ್(88) ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

ರಾಮಚಂದ್ರ ರಾವ್ ಅವರು ಭಾರತೀಯ ಭೂಸೇನೆಯಲ್ಲಿ ವಿವಿಧ ಹುದ್ದೆಗಳನ್ನು ಪಡೆದು 1962ರ ಚೀನಾ, 1967ರ ಪಾಕಿಸ್ತಾನದೊಂದಿಗಿನ ಯುದ್ಧ ಹಾಗೂ 1972ರ ಬಾಂಗ್ಲಾ ವಿಮೋಚನೆಯ ಕಾರ್ಯಾಚರಣೆಯಲ್ಲಿ ಭಾಗವಹಿಸಿ ದೇಶ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ನಿವೃತ್ತಿಯ ಬಳಿಕ ಉಡುಪಿಗೆ ಬಂದು ಮಾಜಿ ಸೈನಿಕರ ವೇದಿಕೆ, ಪೂರ್ಣಪ್ರಜ್ಞಾ ಕಾಲೇಜಿನ ಆಡಳಿತ ಮಂಡಳಿ, ಶ್ರೀಕೃಷ್ಣ ಬಾಲನಿಕೇತನ, ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ‘ನವೀನ್ ಪೇಜಾವರ ಟ್ರಸ್ಟ್’ ಮೂಲಕ ಬಡವರಿಗೆ ಆಸರೆಯಾಗಿದ್ದರು. 2017ರಲ್ಲಿ ಪತ್ನಿ ಮಾಲತಿ ರಾವ್ ರೊಂದಿಗೆ ಇವರಿಗೆ ಯಕ್ಷಗಾನ ಕಲಾರಂಗವು ಎಸ್. ಗೋಪಾಲಕೃಷ್ಣರ ಸಂಸ್ಮರಣಾ ‘ಸೇವಾಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮೃತರು ಪತ್ನಿ ಇಬ್ಬರು ಪುತ್ರರು ಓರ್ವ ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಮತ್ತು ಮಾಜಿ ಅಧ್ಯಕ್ಷರಾಗಿದ್ದ ಕೆ. ಗಣೇಶ್ ಜಿ ರಾವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

No Comments

Leave A Comment