Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

‘ರಾಬರ್ಟ್’ ನಿರ್ಮಾಪಕ ಹತ್ಯೆ ಯತ್ನ ಪ್ರಕರಣ: ರೌಡಿಶೀಟರ್ ರಾಜೀವ್ ಬಂಧನ

ಬೆಂಗಳೂರು: ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಅವರ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ರಾಜೀವ್ ಅಲಿಯಾಸ್ ಕರಿಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ನೇಪಾಳ ಬಾರ್ಡರ್ ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕೆ.ಜೆ.ನಗರ ಇನ್ಸ್‌ಪೆಕ್ಟರ್‌ ಚೇತನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಈತ ಸಿಕ್ಕಿಬಿದ್ದಿದ್ದಾನೆ.

ಕಳೆದ ವರ್ಷ ಉಮಾಪತಿ ಶ್ರೀನಿವಾಸ್​ ಗೌಡ ಮತ್ತು ಅವರ ಸಹೋದರ ದೀಪಕ್​ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ರೌಡಿಶೀಟರ್ ರಾಜೀವ್ ವ್ಯವಸ್ಥಿತ ಸಂಚಿನ ದರೋಡೆ, ಭೂಗತ ಚಟುವಟಿಕೆ ನಡೆಸುತ್ತಿದ್ದನು.

ಪ್ರಕರಣ ಸಂಬಂಧ ಜಯನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು.ಇದಕ್ಕೆ ಹಿಂದೆ ಹನ್ನೊಂದು ಜನರನ್ನು ಪೊಲೀಸರು ಬಂಧಿಸಿದ್ದು ರಾಜೀವ್ ಬಂಧನಕ್ಕಾಗಿ ಎರಡು ತಿಂಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದ್ದರು.

ದರ್ಶನ್ ಅಭಿನಯದ ‘ರಾಬರ್ಟ್​’ ಚಿತ್ರವನ್ನು ನಿರ್ಮಿಸಿದ್ದ ಉಮಾಪತಿ ಶ್ರೀನಿವಾಸ್​ ಗೌಡ ಚಿತ್ರದ ಮೂಲಕ ಸಾಕಷ್ಟು ದೊಡ್ಡ ಲಾಭ ಪಡೆದಿದ್ದಾರೆ. ಪ್ರಸ್ತುತ ಅವರು ಶ್ರೀಮುರಳಿ ಅಭಿನಯದ ‘ಮದಗಜ’  ಚಿತ್ರದ ನಿರ್ಮಾಣದಲ್ಲಿ ತೊಡಗಿದ್ದಾರೆ.

No Comments

Leave A Comment