Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಉಡುಪಿ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಪುನಃಪ್ರತಿಷ್ಠೆ, ಬ್ರಹ್ಮಕಲಶ ಸ೦ಪನ್ನ…

ಉಡುಪಿ: ಶ್ರೀ ಪುತ್ತಿಗೆ ಮಠದ ಆಡಳಿತದ, ಉಡುಪಿಯ ಇತಿಹಾಸ ಪ್ರಸಿದ್ಧ ಪಣಿಯಾಡಿಯಲ್ಲಿನ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ನವೀಕರಣದ ಪ್ರಥಮ ಹಂತ ಶಿಲಾಮಯ ಗರ್ಭಗೃಹ ಹಾಗೂ ಶಿಲಾಮಯ ತೀರ್ಥಮಂಟಪ ನಿರ್ಮಿಸಿ ದೇವರಿಗೆ ಸಮರ್ಪಣೆ ಶ್ರೀದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶ ಅಭಿಷೇಕವು ನಡೆಯುವುದರ ಮೂಲಕ ಇತ್ತೀಚಿಗೆ ಸಂಪನ್ನ ಗೊಂಡಿತು.

ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವೇ. ಮೂ. ಪುತ್ತೂರು ಹಯವದನ ತಂತ್ರಿ ಹಾಗೂ ಪಂಜ ಭಾಸ್ಕರ ಭಟ್ ಇವರ ನೇತೃತ್ವದಲ್ಲಿ ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ಸಾಂಗವಾಗಿ ಸರಳವಾಗಿ ಸಂಪನ್ನ ಗೊಂಡಿತು. ಮ೦ಗಳವಾರದ೦ದು ಸತ್ಯನಾರಾಯಣ ಪೂಜೆಯನ್ನು ನಡೆಸಲಾಯಿತು.

ಎರಡನೇ ಹಂತದ ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಕೋವಿಡ್19ರ ಮಾರ್ಗಸೂಚಿಯಂತೆ ಕಾರ್ಯಕ್ರಮಗಳನ್ನು ಶಾಸ್ತ್ರೀಯವಾಗಿ ಹಾಗೂ ಸರಳವಾಗಿ ಆಚರಿಸಲಾಯಿತು.

ದೇವಸ್ಥಾನದ ಜೀಣೋದ್ದಾರ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಈ ಸ೦ದರ್ಭದಲ್ಲಿ ಹಾಜರಿದ್ದರು.

No Comments

Leave A Comment