Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಅಕ್ರಮ ಹಣವರ್ಗಾವಣೆ: ಮಹಾರಾಷ್ಟ್ರ ಮಾಜಿ ಸಚಿವ ಅನಿಲ ದೇಶಮುಖ್ ಮನೆಯಲ್ಲಿ ಇಡಿ ಶೋಧ

ನಾಗ್ಪುರ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ ದೇಶ್ ಮುಖ್ ಅವರ ನಾಗ್ಪುರ ಮತ್ತು ಮುಂಬಯಿ ನಿವಾಸದ ಮೇಲೆ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ದಾಳಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗ್ಪುರದ ದೇಶಮುಖ್ ಅವರ ನಿವಾಸವೂ ಸೇರಿದಂತೆ ಹಲವೆಡೆ ಪರಿಶೀಲನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಅನಿಲ್ ದೇಶ್ ಮುಖ್ ಮತ್ತು ಇತರರ ವಿರುದ್ಧ ಸಿಬಿಐ ಕಳೆದ ತಿಂಗಳು ಅಕ್ರಮ ಹಣಕಾಸು ವರ್ಗಾವಣೆ ಸಂಬಂಧ ಎಫ್ ಐ ಆರ್ ದಾಖಲಿಸಿತ್ತು.

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಅನಿಲ್ ದೇಶ್ ಮುಖ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು. ಬಾಂಬೆ ಹೈಕೋರ್ಟ್ ಆದೇಶದಂತೆ ಸಿಬಿಐ ಎಫ್ ಐ ಆರ್ ದಾಖಲಿಸಿದೆ

No Comments

Leave A Comment