Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣ – ನಾಲ್ವರು ವಶಕ್ಕೆ

ಬೆಂಗಳೂರು, ಜೂ.25: ಗುರುವಾದಂದು ನಡೆದ ಛಲವಾದಿಪಾಳ್ಯ ವಾರ್ಡ್ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪಶ್ಚಿಮ ವಿಭಾಗದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಗುರುವಾರ ಬೆಳಿಗ್ಗೆ ಫ್ಲವರ್ ಗಾರ್ಡನ್‌ನಲ್ಲಿರುವ ಕಚೇರಿ ಎದುದು ರೇಖಾ ಅವರನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆಗೊಳಿಸಿದ್ದು, ಈ ಸಂಬಂಧ ತನಿಖೆಗೆ ಪೊಲೀಸರ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಇನ್ನು ಕೃತ್ಯ ನಡೆದ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹಾಗೂ ಪ್ರಮುಖ ಆರೋಪಿಗಳ ಸಹಚರರು ಸೇರಿದಂತೆ ಒಟ್ಟು 50 ಮಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದು, ಘಟನೆಯ ಪ್ರತಿಯೊಂದು ಸಂಗತಿಗಳನ್ನು ದಾಖಲಿಸಿಕೊಂಡು ಪ್ರಮುಖ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ರೇಖಾ ಅವರೊಂದಿಗಿದ್ದವರೇ ಹತ್ಯೆ ಮಾಡಿ ನಾಪತ್ತೆಯಾಗಿರುವುದಾಗಿ ಮೇಲ್ನೋಟಕ್ಕೆ ಕಂಡುಬಂದಿದ್ದು, ಕೃತ್ಯದ ಬಳಿಕ ಆರೋಪಿಗಳು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿ ನಗರ ತೊರೆದಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment