Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

50 ಕೋಟಿ ರೂ. ಮೌಲ್ಯದ ಡ್ರಗ್ಸ್ ಇಂದು ನಾಶ

ಬೆಂಗಳೂರು: ಕಳೆದ ವರ್ಷ ರಾಜ್ಯದಲ್ಲಿ ವಶಪಡಿಸಿಕೊಂಡಿರುವ ರೂ.50 ಕೋಟಿ ಗಿಂತಲೂ ಹೆಚ್ಚು ಮೌಲ್ಯದ ವಿವಿಧ ಪ್ರಕಾರದ ಮಾದಕ ವಸ್ತುಗಳನ್ನು ಶನಿವಾರ ನಾಶಪಡಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿರುವ ಅವರು, ಅಂತರಾಷ್ಟ್ರೀಯ ಡ್ರಗ್ ವಿರೋಧಿ ಮತ್ತು ಅಕ್ರಮ ಕಳ್ಳಸಾಗಣೆ ದಿನದ ಅಂಗವಾಗಿ ನ್ಯಾಯಾಲಯದ ಆದೇಶದ ಮೇರೆಗೆ ಡ್ರಗ್ಸ್ ನಾಶ ಮಾಡಲಾಗುವುದು ಎಂದು ಹೇಳಿದ್ದಾರೆ.

ಗಾಂಜಾ-ಅಫೀಮು, ಬ್ರೌನ್ ಶುಗರ್, ಹೆರಾಯಿನ್, ಚೆರಸ್ ಕೊಕೇನ್ ಸೇರಿ ಒಟ್ಟು 12 ಪ್ರಕಾರದ ರೂ.5.23 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವಶಪಡಿಸಿಕೊಂಡಿರುವ ಮಾದಕ ವಸ್ತುಗಳನ್ನು ನಾಶಪಡಿಸಲಾಗುವುದು. ಕಳೆದ ವರ್ಷ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಒಟ್ಟು 4066 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 5291 ಜನರನ್ನು ಬಂಧನಕ್ಕೊಳಪಡಿಸಲಾಗಿದೆ.

ದೇಶದಲ್ಲಿ ಮೊಟ್ಟ ಮೊದಲ ಬಾರಿ ಪಿಐಟಿ ಎನ್’ಡಿಪಿಎಸ್ ಕಾಯ್ದೆ ಅಡಿ ಡ್ರಗ್ಸ್ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಈ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ ಮೊದಲ ರಾಜ್ಯ ಎಂಬ ಹೆಗ್ಗಾಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಇದು ಒಂದು ರೀತಿ ಗೂಂಡಾ ಕಾಯ್ದೆ ಇದ್ದಂತೆ. ಅಷ್ಟು ಸುಲಭವಾಗಿ ಜಾಮೀನು ಸಿಗುವುದಿಲ್ಲ ಎಂದಿದ್ದಾರೆ.

ನಗರ ಹಾಗೂ ಕೇಂದ್ರ ವಲಯದ ಜಿಲ್ಲೆಗಳಲ್ಲಿ ಜಪ್ತಿಯಾಗಿರುವ ಮಾದಕ ವಸ್ತುಗಳನ್ನು ಮೊದಲು ಎಸ್ಪಿ/ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿಡಲಾಗುವುದು. ನಂತರ ಹೊರವಲಯದಲ್ಲಿ ದಹಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

No Comments

Leave A Comment