Log In
BREAKING NEWS >
ಉಡುಪಿಯ ಕಲ್ಸ೦ಕದ ರೋಯಲ್ ಗಾರ್ಡನ್ ನಲ್ಲಿ ಉಡುಪಿ ಉತ್ಸವ ಆರ೦ಭವಾಗಿದ್ದು ಪ್ರತಿ ನಿತ್ಯವೂ ಸಾಯ೦ಕಾಲ 4ರಿ೦ದ 9ಗ೦ಟೆಯವರೆಗೆ ವೀಕ್ಷಿಸಲು ಅವಕಾಶವಿದೆ....

ಸುಪ್ರಸಿದ್ಧ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ

ಸುಪ್ರಸಿದ್ಧ ವಿಜ್ಞಾನ ಬರಹಗಾರ, ಡಿ.ಆರ್.ಡಿ.ಒ ಮಾಜಿ ವಿಜ್ಞಾನಿ, ಹೆಚ್.ಎ.ಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್​ ಸುಧೀಂದ್ರ ಹಾಲ್ದೊಡ್ಡೇರಿ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತಕ್ಕೆ ಈಡಾಗಿದ್ದ ಅವರು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಹಿಂದೆ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು ಅವರ ಮೆದುಳು ನಿಷ್ಕ್ರಿಯ (Brain Dead) ಹಂತಕ್ಕೆ ತಲುಪಿದೆ. ಪರಿಸ್ಥಿತಿ ಕಷ್ಟವಿದೆ ಎಂದು ಹೇಳಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸುಧೀಂದ್ರ ಹಾಲ್ದೊಡ್ಡೇರಿ ಕೊನೆಯುಸಿರೆಳೆದಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಚಿಕಿತ್ಸೆಯಲ್ಲಿದ್ದ ಹಾಲ್ದೊಡ್ಡೇರಿ ಸುಧೀಂದ್ರ (Sudhindra Haldodderi) ಅವರನ್ನು ತಜ್ಞ ವೈದ್ಯರ ತಂಡ ನೋಡಿಕೊಳ್ಳುತ್ತಿತ್ತು. ಸುಧೀಂದ್ರ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರಾದರೂ ಅವರಿಗೆ ಪ್ರಜ್ಞೆ ಇಲ್ಲವಾಗಿತ್ತು. ಹಾಲ್ದೊಡ್ಡೇರಿ ಸುಧೀಂದ್ರ ಅವರಿಗೆ ಕೆಲ ದಿನಗಳ ಹಿಂದೆ ಯಾವ ಪ್ರಮಾಣದ ಹೃದಯಾಘಾತವಾಗಿತ್ತೆಂದರೆ ಅವರ ಮೆದುಳಿಗೆ ಆಕ್ಸಿಜನ್​ ಸರಬರಾಜು ಆಗುವುದು ನಿಂತು, ಅವರ ಮೆದುಳು ಬಹುತೇಕ ನಿಷ್ಕ್ರಿಯಗೊಂಡಿದೆ (Hypoxic ischemic encephalopathy -HIE) ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದ್ದವು.

ಅಂದಹಾಗೆ, ಅವರಿಗೆ ಕೊರೊನಾ ಸೋಂಕು ತಗುಲಿರಲಿಲ್ಲ ಎನ್ನುವುದನ್ನೂ ಆಸ್ಪತ್ರೆಯ ಮೂಲಗಳು ಸ್ಪಷ್ಟಪಡಿಸಿವೆ.ಹಾಲ್ದೊಡ್ಡೇರಿ ಸುಧೀಂದ್ರ ಅವರನ್ನು ಉಳಿಸಿಕೊಳ್ಳಲು ಎಲ್ಲ ಪ್ರಯತ್ನ ನಡೆಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ಅವರು ಚೇತರಿಸಿಕೊಳ್ಳುವುದು ಕಷ್ಟಸಾಧ್ಯವಾಗಿದೆ ಎಂದು ವೈದ್ಯರು ಹೇಳಿದ್ದರಾದರೂ ಅವರು ಗುಣಮುಖರಾಗಲಿ ಎಂದು ಅನೇಕರು ಆಶಿಸಿದ್ದರು. ತೀವ್ರ ಹೃದಯಾಘಾತವಾದ ಕಾರಣ ಅವರ ಸ್ಥಿತಿ ಗಂಭೀರಗೊಂಡು, ಬ್ರೈನ್​ ಡೆಡ್ ಆಗುವ ಹಂತ ತಲುಪಿತ್ತು. ವೈದ್ಯಕೀಯ ವಿಜ್ಞಾನ ​ಈ ಹಿರಿಯ ವಿಜ್ಞಾನಿಯನ್ನು ಕಾಪಾಡಬಹುದು ಎಂದು ಹಾಲ್ದೊಡ್ಡೇರಿ ಸುಧೀಂದ್ರ ಅವರ (Sudhindra HN) ಹಿತೈಷಿಗಳು, ಅಪಾರ ಗೆಳೆಯರು ಆಶಿಸಿದ್ದರೂ ಅದು ಫಲ ನೀಡಿಲ್ಲ.

No Comments

Leave A Comment