Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಬೆಳ್ತಂಗಡಿ: ಧರ್ಮಸ್ಥಳ ದೇಗುಲದಲ್ಲಿ ಸಂಪೂರ್ಣ ಸ್ಯಾನಿಟೈಸ್‌ – ಜು. 5ರಿಂದ ದೇವರ ದರ್ಶನಕ್ಕೆ ಅವಕಾಶ

ಬೆಳ್ತಂಗಡಿ, ಜು 04 : ಜುಲೈ 5ರಿಂದ ರಾಜ್ಯಾದ್ಯಂತ ದೇಗುಲಗಳು ಓಪನ್‌ ಹಿನ್ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ಈ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಂಪೂರ್ಣ ಸ್ಯಾನಿಟೈಸ್‌ ಮಾಡಲಾಗುತ್ತಿದೆ. ದೇವಸ್ಥಾನದ ಒಳಾಂಗಣ, ಹೊರಾಂಗಣ, ಅನ್ನ ಛತ್ರ, ವಸ್ತು ಸಂಗ್ರಹಾಲಯದಲ್ಲಿ ದೇವದ ಸಿಬ್ಬಂದಿಗಳ ಸ್ಯಾನಿಟೈಸ್‌ ಮಾಡುತ್ತಿದ್ದಾರೆ.

ನಾಳೆಯಿಂದ ದೇವಾಲಯಗಳು ಓಪನ್‌‌‌‌ ಆಗಲಿದ್ದು, ಈ ಹಿನ್ನೆಲೆ ಭಕ್ತರ ಸಂಖ್ಯೆ ಹೆಚ್ಚಿರುವ ಸಾಧ್ಯತೆ ಇದೆ. ದೇವಳದ ಆಡಳಿತ ಮಂಡಳಿ, ಕೇವಲ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದೆ.

No Comments

Leave A Comment