Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕ: ರಾಷ್ಟ್ರಪತಿ ಭವನ ಪ್ರಕಟಣೆ

ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ಗೆಹ್ಲೋಟ್ ಅಧಿಕಾರ ವಹಿಸಿಕೊಳ್ಳುವ ಮೂಲಕ ವಜುಬಾಯಿ ವಾಲಾ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ.

ಪ್ರಸ್ತುತ ರಾಜ್ಯಪಾಲರಾಗಿದ್ದ ವಜುಬಾಯ್ ವಾಲಾ ಅವರ ಅಧಿಕಾರಾವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ರಾಜ್ಯಪಾಲರನ್ನು ರಾಷ್ಟ್ರಪತಿ ನೇಮಕ ಮಾಡಿದ್ದಾರೆ.100%

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಪುಟ ವಿಸ್ತರಣೆ ಸಂಬಂಧ ನಡೆಯಲಿರುವ ಬಹುನಿರೀಕ್ಷಿತ ಸಭೆಗೆ ಮುನ್ನ ರಾಜ್ಯಪಾಲರುಗಳ ನೇಮಕದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ.ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿ, ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿದ ಅನುಭವ ಗೆಹ್ಲೋಟ್ ಅವರಿಗಿದೆ. ನರೇಂದ್ರ ಮೋದಿ ಸರ್ಕಾರದಲ್ಲಿ ಗೆಹ್ಲೋಟ್ ಅವರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದರು.

8 ರಾಜ್ಯಗಳಿಗೆ ನೂತನ ರಾಜ್ಯಪಾಲರು: ಇನ್ನುಳಿದಂತೆ ಮಿಜೋರಾಂ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಅವರನ್ನು ಗೋವಾ ರಾಜ್ಯಪಾಲರಾಗಿ,  ಹರಿಯಾಣ ಗವರ್ನರ್ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ತ್ರಿಪುರಾ ರಾಜ್ಯಪಾಲರಾಗಿ, ತ್ರಿಪುರ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಜಾರ್ಖಂಡ್‌ಗೆ ವರ್ಗಾಯಿಸಲಾಗಿದೆ. ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ ಅವರನ್ನು ಹರಿಯಾಣ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.

ಇನ್ನುಳಿದಂತೆ ಮಿಜೋರಾಂ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಅವರನ್ನು ಗೋವಾ ರಾಜ್ಯಪಾಲರಾಗಿ,  ಹರಿಯಾಣ ಗವರ್ನರ್ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ತ್ರಿಪುರಾ ರಾಜ್ಯಪಾಲರಾಗಿ, ತ್ರಿಪುರ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಜಾರ್ಖಂಡ್‌ಗೆ ವರ್ಗಾಯಿಸಲಾಗಿದೆ. ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ ಅವರನ್ನು ಹರಿಯಾಣ ರಾಜ್ಯಪಾಲರಾಗಿ ವರ್ಗಾಯಿಸಲಾಗಿದೆ.

ಹರಿ ಬಾಬು ಕಂಭಂಪತಿ ಮಿಜೋರಾಂ ರಾಜ್ಯಪಾಲರಾಗಿ, ಮಂಗುಭಾಯ್ ಛಗಂಬಾಯ್ ಪಟೇಲ್ ಮಧ್ಯಪ್ರದೇಶದ ರಾಜ್ಯಪಾಲರಾಗಿ, ರಾಜೇಂದ್ರ ವಿಶ್ವನಾಥ್ ಅರ್ಲೆಕರ್ ಅವರನ್ನು ಹಿಮಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

No Comments

Leave A Comment