Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಹಿರಿಯ ಪತ್ರಕರ್ತ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಧ್ಯಮ ಸಲಹೆಗಾರ ಕೆ ಸಿ ಸದಾನಂದ ನಿಧನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಮಾಧ್ಯಮ ಸಮನ್ವಯ ಅಧಿಕಾರಿಯಾಗಿದ್ದ ಹಿರಿಯ ಪತ್ರಕರ್ತ ಕೆ.ಸಿ.ಸದಾನಂದ ನಿಧನರಾಗಿದ್ದಾರೆ.

ತೀವ್ರ ಹೃದಯಾಘಾತದಿಂದ ಅವರು ಕಳೆದ ರಾತ್ರಿ 12 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ಪತ್ನಿ ಮತ್ತು ಪುತ್ರನನ್ನು ಅವರು ಅಗಲಿದ್ದಾರೆ.ತೀವ್ರ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಕೂಡಲೇ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮಾರ್ಗ ಮಧ್ಯೆ ಅಸುನೀಗಿದ್ದಾರೆ.

ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ 2018ರಲ್ಲಿ ರಾಜ್ಯದ ಸಿಎಂ ಆಗಿದ್ದಾಗ ಹಿರಿಯ ಪತ್ರಕರ್ತ ಸದಾನಂದ ಕೆ.ಸಿ ಅವರನ್ನು ಮಾಧ್ಯಮ ಸಮನ್ವಯ ಅಧಿಕಾರಿಯನ್ನಾಗಿ ನೇಮಿಸಿದ್ದರು. ಅವರು ಈ ಹಿಂದೆ ಸಂಜೆವಾಣಿ, ಕರ್ನಾಟಕ ಮಲ್ಲ ಪತ್ರಿಕೆಗಳಲ್ಲಿ ಸುದೀರ್ಘ ಕಾಲ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದರು.

ನಿಧನಕ್ಕೆ ಮೊದಲು ಕೂಡ ಹೆಚ್ ಡಿ ಕುಮಾರಸ್ವಾಮಿಯವರ ಬಳಿ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದರು.

ಮಾಜಿ ಸಿಎಂ ಕಂಬನಿ: ಪತ್ರಕರ್ತ ಸದಾನಂದ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ದೀರ್ಘ ಕಾಲದ ನನ್ನ ಒಡನಾಡಿ, ಹಿರಿಯ ಪತ್ರಕರ್ತ, ಮಾಧ್ಯಮ ಕಾರ್ಯದರ್ಶಿಯೂ ಆಗಿದ್ದ ಕೆ.ಸಿ. ಸದಾನಂದ ನಿಧನರಾಗಿದ್ದಾರೆ. ಅವರ ಅಗಲಿಕೆ ನನ್ನನ್ನು ನೋವಿಗೆ ತಳ್ಳಿದೆ. ಎಂಥ ಆಮಿಷಗಳಿಗೂ ಜಗ್ಗದ ಸದಾನಂದ ಕರ್ತವ್ಯನಿಷ್ಠೆ, ಸ್ವಾಮಿನಿಷ್ಠೆಯನ್ನೂ ಪ್ರದರ್ಶಿಸಿದ್ದರು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

No Comments

Leave A Comment