Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

‘ಅಮೃತಮತಿ’ಗೆ ಮತ್ತೊಂದು ಗರಿ: ನಟಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ

ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ’ಯ ಪ್ರಸಂಗ ಆಧರಿಸಿ ಸಿದ್ಧವಾಗಿರುವ ‘ಅಮೃತಮತಿ’ ಚಿತ್ರಕ್ಕೆ ಈಗ ಮತ್ತೊಂದು ಪ್ರಶಸ್ತಿ ಬಂದಿದೆ.

ಈಗಾಗಲೇ ಹತ್ತಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿರುವ ಈ ಸಿನಿಮಾ ಹಾಲಿವುಡ್ ಅಂತಾರಾಷ್ಟ್ರೀಯ ಗೋಲ್ಡನ್ ಏಜ್ ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿದೆ.

ಇದಕ್ಕೂ ಮುನ್ನ ನೋಯ್ಡಾದ ಎರಡು ಸಂಸ್ಥೆಗಳು ನಡೆಸಿದ ಎರಡು ಪ್ರತ್ಯೇಕ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲೂ ಹರಿಪ್ರಿಯಾ ಅವರು ಶ್ರೇಷ್ಠ ನಟಿ ಪ್ರಶಸ್ತಿಗೆ ಭಾಜನರಾಗಿದ್ದರು. ಹೀಗಾಗಿ ಒಟ್ಟು ಮೂರು ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅವರು ಶ್ರೇಷ್ಠ ನಟಿ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್‌ ಮೂಲಕ ನಿರ್ಮಾಣಗೊಂಡು ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿದ ‘ಅಮೃತಮತಿ’ ಚಿತ್ರವು ಅಟ್ಲಾಂಟ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ವಿದೇಶಿ ಭಾಷಾ ಚಿತ್ರ’ ಪ್ರಶಸ್ತಿ ಗಳಿಸಿತ್ತು. ಲಾಸ್‌ ಏಂಜಲಿಸ್‌ ಸನ್‌ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ಚಿತ್ರ ಮತ್ತು ಬರಗೂರರಿಗೆ ಶ್ರೇಷ್ಠ ಚಿತ್ರಕಥೆ ಪ್ರಶಸ್ತಿ ಲಭಿಸಿತ್ತು.

No Comments

Leave A Comment