Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಸ೦ಪನ್ನ

ಉಡುಪಿ:ಜುಲೈ, 14: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ ಉಡುಪಿ ವಲಯ ಹಾಗೂ ವಕೀಲರ ಸಂಘ (ರಿ), ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವನಮಹೋತ್ಸವದ ಅಂಗವಾಗಿ ನಡೆದ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಮಣ್ಯ ಜೆ.ಎನ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ದಿವಾಕರ ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೊನಾಲ್ಡ್ ಪ್ರವೀಣ್ ಕುಮಾರ್, ಉಡುಪಿ ವಲಯದ ಉಪ ವಲಯ ಅರಣ್ಯಾಧಿಕಾರಿ ಗುರುರಾಜ ಕಾವ್ರಾಡಿ ಉಪಸ್ಥಿತರಿದ್ದರು.

No Comments

Leave A Comment