Log In
BREAKING NEWS >
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ...

ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್; ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ’!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಸಂಚಲನ ಮೂಡಿಸಿದೆ. ಈ ಸಂಬಂಧ ಕರ್ನಾಟಕ ಕಾಂಗ್ರೆಸ್ ಲೇವಡಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಬಿಎಸ್ ಯಡಿಯೂರಪ್ಪ ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್ ಶೆಟ್ಟರ್ ಮತ್ತು ಕೆಎಸ್ ಈಶ್ವರಪ್ಪ ಅವರು ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ! ಕಾಮಿಡಿ ಪಾತ್ರ ಮಾಡುತ್ತಿದ್ದ ಕಟೀಲ್, ಈಗ ಬಿಜೆಪಿಯ ಹಲವರಿಗೆ ವಿಲ್ಲನ್ ಪಾತ್ರಧಾರಿಯಾಗಿದ್ದಾರೆ! ಎಂದು ಟೀಕಿಸಿದೆ.

ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆನ್ನುವುದು ಈಗ ತಿಳಿದಿದೆ! ಪಕ್ಷದ ರಾಜ್ಯಾಧ್ಯಕ್ಷರಾಗಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಸಚಿವ ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಏಕೆಂದರೆ ಸಂಚಿನ ಸೂತ್ರದಾರನೇ ನಳಿನ್ ಕುಮಾರ್ ಕಟೀಲ್ ಆಗಿದ್ದರೂ ಎಂದು ಕಾಂಗ್ರೆಸ್ ಆರೋಪಿಸಿದೆ.

No Comments

Leave A Comment