Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಕರಾವಳಿಯ ಅವಿಭಜಿತ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ…

ಮಂಗಳೂರು/ ಉಡುಪಿ:ಜು 21 : ಪ್ರವಾದಿ ಇಬ್ರಾಹೀಮ್ ಅವರ ತ್ಯಾಗ, ಬಲಿದಾನದ ದ್ಯೋತಕವಾಗಿ ಬಕ್ರೀದ್ ಹಬ್ಬವನ್ನು ಸಂಭ್ರಮ, ಸಡಗರದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸಹಿತ ರಾಜ್ಯದ ಎಲ್ಲೆಡೆ ಬುಧವಾರ ಆಚರಿಸಲಾಯಿತು.

ಪ್ರಮುಖ ಮಸೀದಿಗಳಲ್ಲಿ ಬೆಳಗ್ಗೆ ಸಾಮೂಹಿಕ ನಮಾಝ್, ಧರ್ಮ ಗುರುಗಳಿಂದ ಈದ್ ಸಂದೇಶ ಸಹಿತ ಪ್ರವಚನ, ಪರಸ್ಪರ ಈದ್ ಶುಭಾಶಯ ವಿನಿಯಮ ನಡೆಯಿತು. ಮಂಗಳೂರಿನಲ್ಲಿ ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಅಲ್ಲದೆ ಬೆಳಗ್ಗೆ 8 ಗಂಟೆಗೆ ಖತೀಬ್ ಸ್ಚದಕತುಲ್ಲಾ ನದ್ವಿ ನೇತೃತ್ವದಲ್ಲಿ ಈದ್ ನಮಾಜ್ ಹಾಗೂ ಖುತ್ಬಾ ಪಾರಾಯಣ ನೆರವೇರಿತು

ಸರ್ಕಾರ ಹೊರಡಿಸಿದ ಮಾರ್ಗಸೂಚಿಯಂತೆ ಅಯಾ ಮಸೀದಿಯ ಸಾಮರ್ಥಕ್ಕೆ ಅನುಗುಣವಾಗಿ ಶೇ. 50 ಕ್ಕೂ ಮೀರದಂತೆ ಹಂತಹಂತವಾಗಿ ಸಾಮೂಹಿಕ ನಮಾಝ್ , ಈದ್ ಖುತ್ಬಾ ನೆರವೇರವೇರಿತು. ಕೊರೊನಾ ಹಿನ್ನಲೆಯಲ್ಲಿ ಅದೇ ರೀತಿ ಎಲ್ಲ ಮಸೀದಿಗಳಲ್ಲಿ ಮಾಸ್ಕ್ ಧಾರಣೆ, ಸುರಕ್ಷಿತ ಅಂತರ ಕಾಪಾಡುವುದು ಕಡ್ಡಾಯಗೊಳಿಸಲಾಗಿತ್ತು.

No Comments

Leave A Comment