Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಪರ್ಯಾಯ ಶ್ರೀಗಳಿ೦ದ ಶ್ರೀಕೃಷ್ಣನಿಗೆ ದಾಸರಪದದ ನೃತ್ಯ ಸೇವೆ…

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಶಯನೀ ಏಕಾದಶಿಯ ಪ್ರಯುಕ್ತ ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ತುಳಸಿ ಹರಿವಾಣವನ್ನು ತಲೆಯ ಮೇಲಿಟ್ಟು “ಡಂಗುರಾವ ಸಾರಿ ಹರಿಯ ” ದಾಸರಪದಕ್ಕೆ ನೃತ್ಯ ಮಾಡಿದರು.

ಕೃಷ್ಣ ದೇವರಿಗೆ ರಾತ್ರಿ ಪೂಜೆ ಆದ ನಂತರ ಉಡುಕು ವಾದ್ಯ, ಸೂರ್ಯವಾದ್ಯ, ನಾದಸ್ವರ, ಸಂಕೀರ್ತನೆ, ಸಂಗೀತ, ಭಾಗವತ ಪುರಾಣಗಳು ಚಂದ್ರಶಾಲೆಯಲ್ಲಿ ನಡೆದ ನಂತರ ದೇವರ ಎದುರಿನ ಮಂಟಪದಲ್ಲಿ ಸ್ವಾಮೀಜಿಯವರು ದೇವರಿಗೆ ಮಂಗಳಾರತಿ ಮಾಡಿ ತುಳಸಿ ಹರಿವಾಣವನ್ನು ತಲೆಯಲಿಟ್ಟು ನೃತ್ಯ ನಡೆಸಿ ಪ್ರದಕ್ಷಿಣೆ ಮಾಡುತ್ತಾರೆ.

ಈ ಸೇವೆಯು ಆಷಾಡ ಮಾಸದ ಶುಕ್ಲ ಏಕಾದಶಿಯಿಂದ ಕಾರ್ತೀಕ ಮಾಸದ ಶುಕ್ಲ ಏಕಾದಶಿಯವರೆಗೆ ಚಾತುರ್ಮಾಸದ 8 ಏಕಾದಶಿಗಳವರೆಗೂ ನಡೆಯುತ್ತದೆ.

No Comments

Leave A Comment