Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಅಶ್ಲೀಲ ವಿಡಿಯೋ ಪ್ರಕರಣ: ಪೊಲೀಸರ ವಿಚಾರಣೆಗೆ ಗೈರಾದ ನಟಿ ಗೆಹಾನಾ ವಶಿಷ್ಠ

ಮುಂಬೈ: ಅಶ್ಲೀಲ ವೆಬ್ ಸೀರಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಗೆಹಾನಾ ವಶಿಷ್ಠ ಮತ್ತು ಇತರ ಇಬ್ಬರು ಮುಂಬೈ ಅಪರಾಧ ವಿಭಾಗದ ವಿಚಾರಣೆಗೆ ಹಾಜರಾಗಲು ವಿಫಲರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಕೆಲವು ಆ್ಯಪ್‌ಗಳ ಮೂಲಕ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಕುಂದ್ರಾ ಬಂಧನದ ನಂತರ, ಕುಂದ್ರಾರ ಆ್ಯಪ್‌ಗಾಗಿ ನಿರ್ಮಿಸಲಾದ ಮೂರು ಚಿತ್ರಗಳಲ್ಲಿ ಕೆಲಸ ಮಾಡಿದ್ದ ಗೆಹಾನಾ ಈ ಹಿಂದೆ ಕಾಮಪ್ರಚೋದಕ ವಿಷಯವು ಅಶ್ಲೀಲ ಚಿತ್ರಗಳಿಗಿಂತ ಭಿನ್ನವಾಗಿದೆ ಎಂದು ಹೇಳಿದ್ದರು.

2021ರ ಫೆಬ್ರವರಿಯಲ್ಲಿ ಕೆಲ ಸಂತ್ರಸ್ತ ಮಹಿಳೆಯರು ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಮುಂಬೈ ಅಪರಾಧ ವಿಭಾಗವು ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿತ್ತು.

ತನಿಖೆ ವೇಳೆ ಸೈಬರ್ ಜಗತ್ತಿನಲ್ಲಿ ಅನೇಕ ಅಶ್ಲೀಲ ಸಂಬಂಧಿತ ಅಪ್ಲಿಕೇಶನ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂಬುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಈವರೆಗೆ ಕನಿಷ್ಠ 11 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment