Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ರಾಜ್ಯದ ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದ ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ, ಹುಬ್ಬಳ್ಳಿ ನನ್ನ ಇಷ್ಟದ ಊರು, ನಾನು ಹುಬ್ಬಳ್ಳಿಯಲ್ಲಿಯೇ ಹುಟ್ಟಿ ಬೆಳೆದವನು, ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಮುಖ್ಯಮಂತ್ರಿಯಾಗಿ ಅಗತ್ಯ ಪ್ರಾಶಸ್ತ್ಯ ನೀಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಿನ್ನೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದು ಪ್ರವಾಹ ಪೀಡಿತ ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ಅವರು, ಹುಬ್ಬಳ್ಳಿಯಲ್ಲಿ ನನಗೆ ದೊಡ್ಡ ಸ್ನೇಹಿತರ ಬಳಗವೇ ಇದೆ,ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಇಲ್ಲಿಯವರೇ. ಅವರೆಲ್ಲರ ಪ್ರೀತಿ, ಆಶೀರ್ವಾದ ಪಡೆದು ನಾನು ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತೇನೆ ಎಂದರು.

ಕೇಂದ್ರ ನಾಯಕರಾದ ಪ್ರಧಾನಿ ಮೋದಿ, ಅಮಿತ್ ಶಾ, ಜೆ ಪಿ ನಡ್ಡಾ ಅವರ ನಿರ್ಣಯಗಳಿಂದಾಗಿ ಇಂದು ನಾನು ರಾಜ್ಯದ ಮುಖ್ಯಮಂತ್ರಿಯಾಗಿದ್ದೇನೆ. ನಾಳೆ ದೆಹಲಿಗೆ ಹೋಗಿ ಅವರ ಬಳಿ ಚರ್ಚಿಸುತ್ತೇನೆ, ಅವರ ಸಹಕಾರ, ವಿಶ್ವಾಸ ಪಡೆದು ಅಧಿಕಾರ ನಡೆಸುತ್ತೇನೆ ಎಂದರು.

ಶೆಟ್ಟರ್ ಜೊತೆ ಚರ್ಚೆ: ನೂತನ ಸಚಿವ ಸಂಪುಟದಲ್ಲಿ ಸಚಿವನಾಗಿ ಸೇರ್ಪಡೆಯಾಗುವುದಿಲ್ಲ ಎಂದು ಹಿರಿಯ ನಾಯಕ ಜಗದೀಶ್ ಶೆಟ್ಟರ್ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶೆಟ್ಟರ್ ಅವರು ನಮ್ಮ ಪಕ್ಷದ ಹಿರಿಯ ನಾಯಕರು, ಅವರ ಜೊತೆ ನಿನ್ನೆಯೇ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ, ನಾನೇ ಖುದ್ದಾಗಿ ಬಂದು ವೈಯಕ್ತಿಕವಾಗಿ ನಿಮ್ಮ ಬಳಿ ಮಾತನಾಡುತ್ತೇನೆ ಎಂದಿದ್ದಾರೆ, ಶೆಟ್ಟರ್ ಅವರು ನನಗೆ ಆತ್ಮೀಯರು, ಅವರ ಬಳಿ ಚರ್ಚಿಸಿ ಅವರ ಸಮಸ್ಯೆ ಬಗ್ಗೆ ತಿಳಿದುಕೊಳ್ಳುತ್ತೇನೆ ಎಂದರು.

No Comments

Leave A Comment