Log In
BREAKING NEWS >
ಮ೦ಗಳವಾರದಿ೦ದ ಪಿತೃ ಪಕ್ಷದ ಆರ೦ಭ...

ಯಾರೇ ಊಟ ಬಿಟ್ಟರೂ ನಾವು ಮೇಕೆದಾಟು ಬಿಡಲ್ಲ: ತ.ನಾಡು ಅಣ್ಣಾಮಲೈ ಉಪವಾಸ ಸತ್ಯಾಗ್ರಹಕ್ಕೆ ಸಿಎಂ ಬೊಮ್ಮಾಯಿ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಮೇಕೆದಾಟಿನಲ್ಲಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಉಪವಾಸ ಸತ್ಯಾಗ್ರ ನಡೆಸುವುದಾಗಿ ಹೇಳಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಾರಾದರೂ ಊಟ ಮಾಡಲಿ, ಬಿಡಲಿ, ನಾವು ಮೇಕೆದಾಟು ಅಣೆಕಟ್ಟು ನಿರ್ಮಿಸುತ್ತೇವೆಂದು ಹೇಳಿದ್ದಾರೆ.

ಅಣ್ಣಾಮಲೈ ಅವರ ಕೆಲಸ ಮಾಡುತ್ತಾರೆ. ಅದು ನಮಗೆ ಸಂಬಂಧಿಸಿದ್ದಲ್ಲ. ಅವರು ಉಪವಾಸ ಮಾಡುವುದಕ್ಕೂ ನನಗೂ ಸಂಬಂಧವಿಲ್ಲ. ಕರ್ನಾಟಕಕ್ಕೆ ಕಾವೇರಿ ನದಿ ನೀರಿನ ಮೇಲೆ ಎಲ್ಲಾ ಹಕ್ಕುಗಳಿವೆ. ನಾವು ನಿಶ್ಚಿತವಾಗಿ ಮೇಕೆದಾಟು ಯೋಜನೆ ಜಾರಿಗೊಳಿಸುತ್ತೇವೆಂದು ತಿಳಿಸಿದ್ದಾರೆ.

ಮೇಕೆದಾಟು ಅಣೆಕಟ್ಟು ವಿರೋಧಿಸಿ ಆ.5ರಂದು ಒಂದು ದಿನದ ಉಪವಾಸ ಕೈಗೊಳ್ಳುವುದಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಹೇಳಿದ್ದರು.

No Comments

Leave A Comment