Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಬೆಳ್ಳಂಬೆಳಗ್ಗೆ ಸೈಕಲ್ ಏರಿದ ಸಿಎಂ ಬೊಮ್ಮಾಯಿ:’ಚೀರ್ ಫಾರ್ ಇಂಡಿಯಾ’ ಸೈಕಲ್ ಜಾಥಾಕ್ಕೆ ಚಾಲನೆ

ಬೆಂಗಳೂರು: ರಾಜಕೀಯ ನಾಯಕರೆಂದರೆ ಬಿಳಿ ಶರ್ಟ್, ಪಂಜೆ, ಪೈಜಾಮ, ಪ್ಯಾಂಟ್  ಧರಿಸಿಕೊಂಡು ಓಡಾಡುವುದು ಸಾಮಾನ್ಯ ಸಂಗತಿ. ನಾಡಿನ ಮುಖ್ಯಮಂತ್ರಿಯಾಗಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಬಂದ ಮುಖ್ಯಮಂತ್ರಿ ಭಾನುವಾರ ಬೆಳ್ಳಂಬೆಳಗ್ಗೆ ಪ್ಯಾಂಟ್ ಟೀ ಶರ್ಟ್ ಧರಿಸಿ ಸೈಕಲ್ ಏರಿದ್ದಾರೆ.

ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ ವಿಧಾನಸೌಧದ ಮುಂಭಾಗದ ಡಾ. ಬಿ.ಆರ್.ಅಂಬೇಡ್ಕರ್ ವೀಧಿಯಲ್ಲಿ “Cheer 4 India, be like an Olympian – Cycling ride” ಘೋಷವಾಕ್ಯದಡಿ ಆಯೋಜಿಸಿದ್ದ “ಸೈಕಲ್ ರೈಡ್’ ಗೆ ಚಾಲನೆ ನೀಡಿದರು. ಒಲಿಂಪಿಕ್ಸ್ ನಲ್ಲಿ ಪಾಲ್ಗೊಂಡಿರುವ ದೇಶದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಸೈಕಲ್ ರ್ಯಾಲಿ ಇದಾಗಿತ್ತು.

ಈ ವೇಳೆ ಸೈಕಲ್ ಏರಿ ಜಾಥಾ ಹೋಗಿ ಬಂದರು. ಮುಖ್ಯಮಂತ್ರಿಗಳಿಗೆ ಕೇಂದ್ರದ ಮಾಜಿ ಸಚಿವ ಡಿ ವಿ ಸದಾನಂದ ಗೌಡ, ಲೋಕಸಭಾ ಸದಸ್ಯರಾದ ಪಿ ಸಿ ಮೋಹನ್, ತೇಜಸ್ವಿ ಸೂರ್ಯ ಮೊದಲಾದವರು ಸಾಥ್ ನೀಡಿದರು.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರತಿ ವಿಷಯ, ಅಂಶಕ್ಕೂ ಸೂಕ್ಷ್ಮವಾಗಿ ಸ್ಪಂದಿಸುವ ಪ್ರಧಾನ ಮಂತ್ರಿ ಮೋದಿ ಭಾರತ ಮತ್ತು ಭಾರತೀಯತೆಗೆ ಸದಾ ತುಡಿಯುತ್ತಾರೆ, ಪ್ರತಿ ಹೆಜ್ಜೆಗೂ ಯುವ ಜನತೆಗೆ ಸ್ಪೂರ್ತಿ ತುಂಬುತ್ತಿದ್ದಾರೆ ಎಂದು ಹೇಳಿದರು.

ಸ್ವಚ್ಛ ಭಾರತದಿಂದ ಹಿಡಿದು ಪ್ರತಿಯೊಂದು ಕಾರ್ಯಕ್ರಮದಲ್ಲಿ ಮೋದಿಯವರ ಸೂಕ್ಷ್ಮ ಸಂವೇದನೆ ಎದ್ದು ಕಾಣುತ್ತದೆ. ಖೇಲೋ ಇಂಡಿಯಾ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡಿದರೆ, ಜೀತೋ ಇಂಡಿಯಾ ಮೂಲಕ ಕ್ರೀಡಾಪಟುಗಳಿಗೆ ಹುರಿದುಂಬಿಸುತ್ತಿದ್ದಾರೆ. ಅದರ ಭಾಗವಾಗಿ ದೇಶಾದ್ಯಂತ ನಡೆಯುತ್ತಿರುವ ಸೈಕಲ್ ರ್ಯಾಲಿಯಲ್ಲಿ 56 ಸಾವಿರ ಮಂದಿ ಯುವಜನರು ಪಾಲ್ಗೊಳ್ಳುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ನಾನು ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಯುವ ಸಮೂಹ ಏರ್ಪಡಿಸಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸ ಉಂಟುಮಾಡಿದೆ ಎಂದರು.

No Comments

Leave A Comment