Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಮುಂಗಾರು ಪ್ರಭಾವದಿಂದಾಗಿ ಮುಂದಿನ 5 ದಿನಗಳವರೆಗೂ ಹಲವು ರಾಜ್ಯದಾದ್ಯಂತ ಅಧಿಕ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹವಾಮಾನ ಇಲಾಖೆಯ ಬೆಂಗಳೂರು ನಿರ್ದೇಶಕ ಸಿ.ಎಸ್. ಪಾಟೀಲ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ಅಧಿಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದ್ದಾರೆ.

ಇದೇ ವೇಳೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವುದಾಗಿ ತಿಳಿಸಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರುವುದಾಗಿ ತಿಳಿಸಿದ್ದಾರೆ.

ಈ ನಡುವೆ ಗುರುವಾರ ಸಂಜೆ 5.30ರವರೆಗೆ ಬೆಂಗಳೂರಿನಲ್ಲಿ 4.6 ಎಂಎಂ ನಷ್ಟು ಮಳೆಯಾಗಿದ್ದು, ಹೆಚ್ಎಎಲ್ ನಲ್ಲಿ 0.9 ಎಂಎಂ ನಷ್ಟು ಮಳೆಯಾಗಿದೆ ಎಂದು ತಿಳಿದುಬಂದಿದೆ.

ಬುಧವಾರ ಆಗುಂಬೆಯಲ್ಲಿ 11 ಸಿಎಂ, ಕೊಲ್ಲೂ, ಸಂತನಹಳ್ಳಿಯಲ್ಲಿ 6 ಸಿಎಂ ಮಳೆಯಾಗಿದೆ. ಕರಾವಳಿಯಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಈಗಾಗಲೇ ಹವಾಮಾನ ಇಲಾಖೆ ಈ ಪ್ರದೇಶದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

No Comments

Leave A Comment