Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ಸಿ.ಟಿ. ರವಿ; ಬಹಳ ಹೊತ್ತು ಮಾತುಕತೆ!

ಬೆಂಗಳೂರು: ದೆಹಲಿಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ರವಿ ಮತ್ತು ದೇವೇಗೌಡರ ಭೇಟಿ ಸಹಜವಾಗಿಯೇ ರಾಜ್ಯದ ರಾಜಕೀಯ ನಾಯಕರು ಹಾಗೂ ಜನ ಸಾಮಾನ್ಯರಲ್ಲಿ ಕುತೂಹಲ ಮೂಡಿಸಿದೆ. ಬಹಳ ಹೊತ್ತು ಇಬ್ಬರೂ ನಾಯಕರು ರಾಜಕೀಯ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿರುವ ಮಾಹಿತಿ ಸಿಕ್ಕಿದೆ.

ಜೊತೆಗೆ ಭೇಟಿಯ ಬಳಿಕ ಎಚ್.ಡಿ. ದೇವೇಗೌಡರನ್ನು ಸಿಟಿ ರವಿ ಮನತುಂಬಿ ಹೊಗಳಿರುವುದು ವಿಶೇಷ. ಅಷ್ಟಕ್ಕೂ ಸಿ.ಟಿ. ರವಿ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿರುವುದು ಯಾವುದೇ ರಾಜಕೀಯ ಕಾರಣದ ಹಿನ್ನೆಯಿಂದಲ್ಲ. ಬದಲಿಗೆ ಮಾಜಿ ಸಚಿವ ಸಿ.ಟಿ. ರವಿ ಭಾರತದ ರಾಜಕೀಯದ ಮೇಲೆ ಪಿಎಚ್‌ಡಿ ಮಾಡುತ್ತಿದ್ದಾರೆ.

ಸಂಶೋಧನೆಯ ವಿಷಯದ ಭಾಗವಾಗಿ ದೇವೇಗೌಡರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಭೇಟಿ ಬಳಿಕ, ಭಾರತದ ರಾಜಕೀಯದ ಕುರಿತು ಮಾಜಿ ಪ್ರಧಾನಿ ದೇವೇಗೌಡರಿಗೆ ಇರುವ ಆಳವಾದ ಜ್ಞಾನವನ್ನು ಸಿ.ಟಿ. ರವಿ ಮನತುಂಬಿ ಹೊಗಳಿದ್ದಾರೆ.

No Comments

Leave A Comment