Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಚಿತ್ರೀಕರಣದ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣ: ನಿರ್ಮಾಪಕರಿಂದ 10 ಲಕ್ಷ ರೂ. ಪರಿಹಾರದ ಭರವಸೆ!

ಬೆಂಗಳೂರು: ನಿರ್ದೇಶಕ ಗುರು ದೇಶಪಾಂಡೆ ನಿರ್ಮಾಣದ ‘ಲವ್ ಯೂ ರಚ್ಚು’ ಚಿತ್ರೀಕರಣದಲ್ಲಿ ಸಂಭವಿಸಿದ ವಿದ್ಯುದಾಘಾತದಲ್ಲಿ ಮೃತಪಟ್ಟ ಫೈಟರ್ ವಿವೇಕ್ ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರದ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಮೃತ ವಿವೇಕ್ ಚಿಕ್ಕಪ್ಪ ಗೋಪಿ ಈ ವಿಷಯ ತಿಳಿಸಿದ್ದು, ಅಜ್ಞಾತ ಸ್ಥಳದಿಂದಲೇ ದೂರವಾಣಿ ಕರೆ ಮಾಡಿ ಪರಿಹಾರದ ಕುರಿತು ಮಾತನಾಡಿರುವುದಾಗಿ ಹೇಳಿದ್ದಾರೆ. ಇನ್ನು, ಫೈಟರ್ ವಿವೇಕ್ ಮೃತದೇಹದ ಅಂತ್ಯಸಂಸ್ಕಾರವನ್ನು ಬೆಂಗಳೂರಿನ ಹಳೇಗುಡ್ಡದಲ್ಲಿ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ.

ಕಳೆದ 5 ರಾಮನಗರದ ಜೋಗನಪಾಳ್ಯದಲ್ಲಿ ‘ಲವ್ ಯೂ ರಚ್ಚು’ ಚಿತ್ರೀಕರಣ ನಡೆಯುತ್ತಿತ್ತು. ಸೋಮವಾರದ ಚಿತ್ರೀಕರಣದ ಸಂದರ್ಭದಲ್ಲಿ ಬಳಸುತ್ತಿದ್ದ ಮೆಟಲ್ ರೋಪ್, ಹೈಟೆನ್ಷನ್ ವೈರ್ ಗೆ ತಗುಲಿ, ಫೈಟರ್ ವಿವೇಕ್ ಹಾಗೂ ರಂಜಿತ್ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು.

ಕೂಡಲೇ ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವಿವೇಕ್ (35) ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದ್ದರು. ರಂಜಿತ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ

No Comments

Leave A Comment