Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಪದಗ್ರಹಣ

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶುಕ್ರವಾರ ಎಂ.ಎಸ್.ರಕ್ಷಾ ರಾಮಯ್ಯ ಅಧಿಕಾರ ವಹಿಸಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಎಐಸಿಸಿ ಪದಾಧಿಕಾರಿಗಳು ಭಾಗವಹಿಸಿದ್ದರು. ಇದರ ಜೊತೆಗೆ ಚುನಾಯಿತ ಪ್ರತಿನಿಧಿಗಳ ವಾಗ್ದಾನ ಸಮಾರಂಭ ಕೂಡ ನಡೆಯಿತು.

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಕ್ಷಾ ರಾಮಯ್ಯ ಮತ್ತು ಮೊಹಮ್ಮದ್ ನಲಪಾಡ್ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು, ಎರಡೂ ಬಣಗಳ ಕಾರ್ಯಕರ್ತರ ನಡುವೆ ವಾಗ್ದಾಳಿಗಳು ನಡೆದಿದ್ದವು. ನಂತರ ಚುನಾವಣೆ ನಡೆಸಿದಾಗ ನಲಪಾಡ್ ಗೆ ಹೆಚ್ಚಿನ ಮತಗಳು ಬಂದಿದ್ದರೂ ಹಲವು ಅಪರಾಧ ಪ್ರಕರಣಗಳು ಅವರ ಮೇಲೆ ಇರುವುದರಿಂದ ಯುವ ಅಧ್ಯಕ್ಷರನ್ನಾಗಿ ಮಾಡಲಿಲ್ಲ.

ಇದು ಎರಡೂ ಬಣಗಳ ಮಧ್ಯೆ ಇನ್ನಷ್ಟು ದ್ವಂದ್ವ, ವಾಗ್ದಾಳಿಗೆ ಕಾರಣವಾಯಿತು. ನಂತರ ಪಕ್ಷದ ಹಿರಿಯರ ಸಮ್ಮುಖದಲ್ಲಿ ನಡೆದ ಸಂಧಾನದಂತೆ ಮುಂದಿನ ಫೆಬ್ರವರಿಯವರೆಗೆ ಅಧ್ಯಕ್ಷರಾಗಿ ಮುಂದುವರಿದು ನಂತರ ಆ ಸ್ಥಾನವನ್ನು ಮೊಹಮ್ಮದ್ ನಲಪಾಡ್ ಅವರಿಗೆ ಹಸ್ತಾಂತರ ಮಾಡಬೇಕಿದೆ.

No Comments

Leave A Comment