Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಅಫ್ಘಾನ್ ನಲ್ಲಿ ತಾಲಿಬಾನ್ ಅಟ್ಟಹಾಸ: ಹೆರಾತ್ ನಲ್ಲಿ ರಾಜ್ಯಪಾಲರು, ಪೊಲೀಸರ ಸಮೇತ ಎಲ್ಲ ಸರ್ಕಾರಿ ಅಧಿಕಾರಿಗಳ ಶರಣಾಗತಿ

ಕಾಬುಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಮುಂದುವರೆದಿದ್ದು, ಉಗ್ರರ ದಾಳಿಯಿಂದಾಗಿ ಆಫ್ಗಾನಿಸ್ತಾನದ ಹೆರಾತ್ ನಲ್ಲಿ ಸರ್ಕಾರಿ ಅಧಿಕಾರಿಗಳೇ ಉಗ್ರರಿಗೆ ಶರಣಾಗಿದ್ದಾರೆ.

ಈ ಕುರಿತಂತೆ ಆಫ್ಘಾನಿಸ್ತಾನದ ಟೋಲೋ ನ್ಯೂಸ್ ವರದಿ ಮಾಡಿದ್ದು,  ಹೆರಾತ್ ಪ್ರಾಂತ್ಯದ ಸರ್ಕಾರಿ ಅಧಿಕಾರಿಗಳು, ರಾಜ್ಯಪಾಲರು, ಪೊಲೀಸ್ ಮುಖ್ಯಸ್ಥರು, ಮಾಜಿ ಮುಜಾಹಿದ್ದೀನ್ ನಾಯಕ ಮೊಹಮ್ಮದ್ ಇಸ್ಮಾಯಿಲ್ ಖಾನ್, ಆಂತರಿಕ ಭದ್ರತೆಯ ಉಪ ಮಂತ್ರಿ ಮತ್ತು 207 ಜಾಫರ್ ಕಾರ್ಪ್ಸ್ ಕಮಾಂಡರ್ ಗಳು ತಾಲಿಬಾಗ್ ಉಗ್ರರಿಗೆ ಶರಣಾಗಿದ್ದಾರೆ.

ನಿನ್ನೆಯಷ್ಟೇ ತಾಲಿಬಾನ್ ಉಗ್ರರು ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್​ ಅನ್ನು ವಶಕ್ಕೆ ಪಡೆದುಕೊಂಡಿದ್ದರು. ಆ ಮೂಲಕ ಅಫ್ಘಾನಿಸ್ತಾನದ 34 ಪ್ರಾಂತೀಯ ರಾಜಧಾನಿಗಳ ಪೈಕಿ 11 ರಾಜಧಾನಿಗಳನ್ನು ತಾಲಿಬಾನ್ ವಶಕ್ಕೆ ಪಡೆದುಕೊಂಡಂತಾಗಿದೆ.

ಈ ಹಿಂದೆ ಆಫ್ಘಾನಿಸ್ತಾನದಲ್ಲಿ ಅಮೆರಿಕ ಸರ್ಕಾರ ತನ್ನ ಕೊನೆಯ ಸೈನಿಕ ತುಕಡಿಯನ್ನು ಹಿಂದಕ್ಕೆ ಕರೆಸಿಕೊಂಡ ಬೆನ್ನಲ್ಲೇ ತಾಲಿಬಾನಿಗಳು ಮತ್ತೆ ಅಟ್ಟಹಾಸ ಆರಂಭಿಸಿ ಕೇವಲ 15 ದಿನಗಳ ಅಂತರದಲ್ಲಿ ತಾವು ಈ ಹಿಂದೆ ಹಿಡಿತ ಕಳೆದುಕೊಂಡಿದ್ದ ಪ್ರದೇಶಗಳ ಪೈಕಿ ಶೇ.50ರಷ್ಟಕ್ಕೂ ಹೆಚ್ಚು ಪ್ರದೇಶಗಳನ್ನು ವಶಕ್ಕೆ ತೆಗೆದುಕೊಂಡಿದೆ.

No Comments

Leave A Comment