Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಸೊಪೋರ್ ಎನ್ಕೌಂಟರ್: ಮೂವರು ಉಗ್ರರ ಸದೆಬಡಿದ ಸೇನಾಪಡೆ

ಸೊಪೋರ್: ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.

ಸೊಪೋರ್ ನ ಪೆತ್ಸೀರ್ ಎಂಬಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ವಸ್ತುಗಳನ್ನಿಟ್ಟುಕೊಂಡಿರುವ ಉಗ್ರರು ಅಡಗಿ ಕುಳಿತಿದ್ದಾರೆಂಬ ಮಾಹಿತಿ ಸೇನಾಪಡೆಗಳಿಗೆ ತಿಳಿದುಬಂದಿತ್ತು.

ಕೂಡಲೇ ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿ ಸ್ಥಳವನ್ನು ಸುತ್ತುವರೆದ ಯೋಧರು, ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

ಸ್ಥಳದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ವಸ್ತುಗಳನ್ನು ಸೇನಾಪಡೆಗಳು ವಶಕ್ಕೆ ಪಡೆದಿದ್ದು, ಹತ್ಯೆಯಾದ ಉಗ್ರರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ.

No Comments

Leave A Comment