Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಮನೆಯ ಮೇಲ್ಛಾವಣಿ ಕುಸಿದು ಮೂವರು ದುರ್ಮರಣ, ಗಾಯಾಳು ಸ್ಥಿತಿ ಗಂಭೀರ

ಕಾನ್ಪುರ: ಮನೆಯ ಮೇಲ್ಛಾವಣಿ ಕುಸಿದು ಮೂವರು ದುರ್ಮರಣ ಹೊಂದಿರುವ ಘಟನೆ ಉತ್ತರ ಪ್ರದೇಶದ ಕಾನ್ಫುರದಲ್ಲಿ ಇಂದು ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯ ಮೇಲ್ಫಾವಣಿ ಕುಸಿದ ನಂತರ ಮಹಿಳೆ, ಆಕೆ ಮಗ ಹಾಗೂ ಪುತ್ರಿ ಸಾವನ್ನಪ್ಪಿರುವುದಾಗಿ ವೈದ್ಯರು ಹೇಳಿದ್ದಾರೆ. ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ ಎಂದು ಪೂರ್ವ ಕಾನ್ಫುರದ ಡಿಸಿಪಿ ಅನೂಫ್ ಸಿಂಗ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ಸಂಭವಿಸಿದ ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.  ಬೆಳಗ್ಗೆ 6-24 ರ ಸುಮಾರಿನಲ್ಲಿ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿಯಿತು ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ ಕೂಡಲೇ ಸ್ಥಳಕ್ಕೆ ಧಾವಿಸಿ ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿಗಳ ಕಾರ್ಯಾಲಯ ತಿಳಿಸಿದೆ.

No Comments

Leave A Comment