Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಉತ್ತರಾಖಂಡದಲ್ಲಿ ಮತ್ತೊಂದು ಭೂ ಕುಸಿತ: ಇಬ್ಬರು ಸಾವು, 5 ಮಂದಿ ನಾಪತ್ತೆ

ಡೆಹ್ರಾಡೂನ್: ಶಿಖರಗಳ ನಾಡು ಉತ್ತರಾಖಂಡದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿ 5 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರಾಖಂಡದ ಪಿಥೋರಗಡ್ ಜಿಲ್ಲೆಯ ಜುಮ್ಮಾ ಗ್ರಾಮದಬಳಿ ಭೂಕುಸಿತದಿಂದಾಗಿ ಇಬ್ಬರು ಸಾವನ್ನಪ್ಪಿದ್ದು, ಐವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ರಾಜ್ಯ ವಿಪತ್ತು ನಿಗ್ರಹ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಇನ್ನು ಈ ವಿಚಾರವಾಗಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೋಮವಾರ ಟ್ವೀಟ್ ಮಾಡಿದ್ದು, ‘ಪಿಥೋರಘಡ ಜಿಲ್ಲೆಯ ಜುಮ್ಮಾ ಹಳ್ಳಿಯ ಬಳಿ ಭೂಕುಸಿತದಿಂದಾಗಿ ಇಬ್ಬರು ಸಾವನ್ನಪ್ಪಿದ್ದು, 5 ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ. ಈ ನಿಟ್ಟಿನಲ್ಲಿ, ಜಿಲ್ಲಾ ಮ್ಯಾಜಿಸ್ಟ್ರೇಟ್‌ನೊಂದಿಗೆ ತಾವು ಮಾತನಾಡಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಸೂಚನೆಗಳನ್ನು ನೀಡಲಾಗಿದೆ. ಅಲ್ಲಿ ಸಿಲುಕಿರುವ ಜನರ ಸುರಕ್ಷತೆಗಾಗಿ ದೇವರಿಗೆ ಪ್ರಾರ್ಥಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

No Comments

Leave A Comment