Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಟೋಕಿಯೋ ಪ್ಯಾರಾಲಿಂಪಿಕ್ಸ್: ಐತಿಹಾಸಿಕ ದಾಖಲೆ ನಿರ್ಮಿಸಿದ ಅವನಿ ಲೇಖರಾ, ಒಂದೇ ಕ್ರೀಡಾಕೂಟದಲ್ಲಿ 2 ಪದಕ ಗೆದ್ದ ಮೊದಲ ಮಹಿಳೆ

ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಅವರು ಇತಿಹಾಸ ನಿರ್ಮಿಸಿದ್ದು, ಈ ಹಿಂದೆ ಚಿನ್ನ ಗೆದ್ದಿದ್ದ ಅವನಿ ಇದೀಗ ಮತ್ತೆ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ.

ಹೌದು.. ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಶೂಟಿಂಗ್ ವಿಭಾಗದಲ್ಲಿ ಭಾರತದ ಅವನಿ ಲೇಖರಾ ಕಂಚಿನ ಪದಕ ಜಯಿಸಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಶುಕ್ರವಾರ ನಡೆದ ಆರ್ 8 ಈವೆಂಟ್ ನ ಮಹಿಳೆಯರ 50 ಮೀ ರೈಫಲ್ 3 ಪಿ ಎಸ್‌ಎಚ್ 1 ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದ ಅವನಿ ಲೇಖರಾ ಕಂಚಿನ ಪದಕ ಗೆದ್ದಿದ್ದಾರೆ.

ಈ ಫೈನಲ್ ಪಂದ್ಯದಲ್ಲಿ ಭಾರತದ ಅವನಿ ಲೇಖರಾ ಒಟ್ಟು 445.9ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ. ಅಂತಿಮ ಸುತ್ತು ಆರಂಭಕ್ಕೂ ಮುನ್ನ ಅವನಿ ಕೇವಲ  149.5 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರು. ಆದರೆ ಅಂತಿಮ ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ನೀಡಿ ಮೂರನೇ ಸ್ಥಾನ ಪಡೆದರು.

100%

ಹಾಲಿ ಕ್ರೀಡಾಕೂಟದಲ್ಲಿ ಅವನಿಗೆ ಇದು 2ನೇ ಪದಕ
ಇನ್ನು ಇದಕ್ಕೂ ಮೊದಲು ಇದೇ ಅವನಿ ಲೇಖರಾ ಚಿನ್ನದ ಪದಕ ಗೆದ್ದಿದ್ದರು. 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತದ ಅವನಿ ಲೇಖಾ ಚಿನ್ನದ ಪದಕ ಗೆಲ್ಲುವ ಮೂಲಕ ಈ ರೀತಿಯ ಸಾಧನೆ ಮಾಡಿದ ಮೊದಲ ಭಾರತೀಯ ಪ್ಯಾರಾಒಲಿಂಪಿಕ್ಸ್ ಮಹಿಳಾ ಕ್ರೀಡಾಪಟು ಎಂಬ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದ್ದಾರೆ.

ಐತಿಹಾಸಿಕ ಸಾಧನೆ
ಇನ್ನು ಒಂದೇ ಕ್ರೀಡಾಕೂಟದಲ್ಲಿ 2 ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಕೀರ್ತಿಗೆ ಅವನಿ ಲೇಖರಾ ಪಾತ್ರರಾಗಿದ್ದಾರೆ.

12ಕ್ಕೇರಿದ ಪದಕಗಳ ಸಂಖ್ಯೆ
ಇನ್ನು ಅವನಿ ಅವರ ಈ ಕಂಚಿನ ಪದಕ ಗಳಿಕೆಯ ಬಳಿಕ ಹಾಲಿ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 12ಕ್ಕೇರಿಕೆಯಾಗಿದೆ. ಈ ಪೈಕಿ 2 ಚಿನ್ನ, 6 ಬೆಳ್ಳಿ ಮತ್ತು 4 ಕಂಚಿನ ಪದಕಗಳಿವೆ.

No Comments

Leave A Comment